ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಶೃಂಗೇರಿ ಪೋಕ್ಸೋ ಕೇಸ್ ನ ಅಪರಾಧಿಗಳಿಗೆ 20 ವರ್ಷ ಜೈಲು ಶಿಕ್ಷೆ

shringeri case
11/03/2024

ಚಿಕ್ಕಮಗಳೂರು: ಅಪ್ರಾಪ್ತ ಮಗಳನ್ನ ತಾಯಿಯೇ ವೇಶ್ಯಾವಾಟಿಕೆಗೆ ದೂಡಿದ್ದ ಪ್ರಕರಣ,  ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಶೃಂಗೇರಿ ಪೋಕ್ಸೋ ಕೇಸ್ ಗೆ ಸಂಬಂಧಿಸಿದಂತೆ ಕೋರ್ಟ್  ನಾಲ್ವರು ಅಪರಾಧಿಗಳಿಗೆ ತಲಾ 25 ಸಾವಿರ ದಂಡ, 20 ವರ್ಷ ಶಿಕ್ಷೆ ಪ್ರಕಟಿಸಿದೆ.

ಬಾಲಕಿ ತಾಯಿ ಗೀತಾ, ಗಿರೀಶ್ , ದೇವಿಶರಣ್ ಗೆ 20 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಲಾಗಿದೆ.  ಅಭಿನಂದನ್ ಅಲಿಯಾಸ್ ಸ್ಮಾಲ್ ಅಭಿಗೆ 22 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಲಾಗಿದೆ.

2021ರಲ್ಲಿ ಶೃಂಗೇರಿ ಪಟ್ಟಣದಲ್ಲಿ ಈ ಘಟನೆ ನಡೆದಿತ್ತು. ಈ ಸಂಬಂಧ 39 ಎಫ್.ಐ.ಆರ್ ದಾಖಲಾಗಿತ್ತು. ಅಲ್ಲದೇ 53 ಜನ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು.

2020ರ ಸೆಪ್ಟೆಂಬರ್ ನಿಂದ 2021ರ ಜನವರಿವರೆಗೆ ಬ್ಲಾಕ್ ಮೇಲೆ ಮಾಡಿ  ಅಪ್ರಾಪ್ತ ಬಾಲಕಿಯ ಮೇಲೆ ಕಾಮುಕರು ಅತ್ಯಾಚಾರ ಎಸಗಿದ್ದರು.

2021ರ ಜನವರಿ 27ರಂದು ಈ ಬಗ್ಗೆ ಪ್ರಕರಣ ದಾಖಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ 53 ಜನರ ವಿರುದ್ದ ಪ್ರಕರಣ ದಾಖಲಾಗಿತ್ತು. ಈ ಪೈಕಿ ನಾಲ್ಕು ಜನರ ಮೇಲಿನ ಅಪರಾಧವನ್ನ ಸಾಬೀತು ಮಾಡಿದ್ದ ಕೋರ್ಟ್, ಉಳಿದ 49 ಮಂದಿ ಪ್ರಕರಣದಿಂದ ಖುಲಾಸೆ‌ಗೊಳಿಸಿತ್ತು.

ಒಂದೇ ಪ್ರಕರಣದಲ್ಲಿ 38 ವಿವಿಧ ರೀತಿಯ ಚಾರ್ಜ್ ಶೀಟ್ ನ್ನು ಪೊಲೀಸರು ಸಲ್ಲಿಸಿದ್ದರು.  ಈ ಪ್ರಕರಣವನ್ನು  ವಿಚಾರಣೆ ನಡೆಸಿದ ಜಿಲ್ಲಾ ಹೆಚ್ಚುವರಿ ಸತ್ರ ನ್ಯಾಯಾಲಯದ ನ್ಯಾಯಮೂರ್ತಿ ಶಾಂತಣ್ಣ ಆಳ್ವ ಶಿಕ್ಷೆ ಪ್ರಕಟಿಸಿದರು. ಕೋರ್ಟ್ ನ ತೀರ್ಪು ಅಪ್ರಾಪ್ತರ ಮೇಲೆ ಲೈಂಗಿಕ ದೌರ್ಜನ್ಯ ಎಸಗುವ ಕಾಮುಕರಿಗೆ ಎಚ್ಚರಿಕೆಯ ಕರೆಗಂಟೆಯಾಗಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ

Exit mobile version