3:51 AM Wednesday 29 - October 2025

ಕಾಫಿನಾಡ ಏಕೈಕ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡರಿಗೆ ತಟ್ಟಿದ ಬಂಡಾಯದ ಬಿಸಿ!

ilyas
30/03/2023

ಚಿಕ್ಕಮಗಳೂರು: ಕಾಫಿನಾಡ ಏಕೈಕ ಕಾಂಗ್ರೆಸ್ ಶಾಸಕರಾಗಿರುವ ಶೃಂಗೇರಿ ವಿಧಾನ ಸಭಾ ಕ್ಷೇತ್ರದ  ಶಾಸಕ ಟಿ.ಡಿ. ರಾಜೇಗೌಡರಿಗೆ ಬಂಡಾಯದ ಬಿಸಿ ತಟ್ಟಿದ್ದು,  ಕೈ ಮುಖಂಡ ಇಲ್ಯಾಸ್, ರಾಜೇಂದ್ರ ಗೌಡ ವಿರುದ್ಧ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ.

ಲಕ್ಷ ಖರ್ಚು ಮಾಡಿದ್ರೆ ನೂರು ಜನಕ್ಕೆ ನೀರು ಕೊಡಬಹುದು, ಅದನ್ನ ಬಿಟ್ಟು ಶಾಸಕರು ಯಾರ್ದೋ ತೋಟದಲ್ಲಿ 35 ಲಕ್ಷ ಖರ್ಚು ಮಾಡಿ ಚೆಕ್ ಡ್ಯಾಂ ನಿರ್ಮಿಸುತ್ತಾರೆ. ಶಾಸಕರಿಂದ ಶೃಂಗೇರಿ ಕ್ಷೇತ್ರ ಅಭಿವೃದ್ಧಿಯಾಗಿಲ್ಲ, ಇದರಿಂದಾಗಿ ಮನನೊಂದು ಚುನಾವಣೆಗೆ ಸ್ಪರ್ಧಿಸುವುದಾಗಿ ಇಲ್ಯಾಸ್ ತಿಳಿಸಿದ್ದಾರೆ.

ಶೃಂಗೇರಿ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ತಾನು ಸ್ಪರ್ಧಿಸುವುದಾಗಿ ಇಲ್ಯಾಸ್ ಅವರು ಘೋಷಿಸಿದ್ದಾರೆ. ಪಕ್ಷದ ನಿಷ್ಠಾವಂತ ಕಾರ್ಯಕರ್ತರನ್ನು ಕಡೆಗಣಿಸಿರುವುದು ಹಾಗೂ ಪಕ್ಷದ ನಡೆಯಿಂದ ಬೇಸತ್ತು ಈ ನಿರ್ಧಾರ ಕೈಗೊಂಡಿರುವುದಾಗಿ ಇಲ್ಯಾಸ್ ಹೇಳಿದ್ದಾರೆ.

ಗೋರಿಗಂಡಿಯ ಕಾಂಗ್ರೆಸ್ ಮುಖಂಡ ಮೊಹಮ್ಮದ್ ಇಲಿಯಾಸ್ ಇದೀಗ ಶಾಸಕ ಟಿ.ಡಿ. ರಾಜೇಗೌಡರಿಗೆ ವಿರುದ್ಧವಾಗಿ ಸ್ಪರ್ಧಿಸಲು ಮುಂದಾಗಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version