ಕೇಂದ್ರ ಸರ್ಕಾರದಿಂದ ಪಿಯುಸಿ ಪಾಸಾದವರಿಗೆ ಭರ್ಜರಿ 2006 ಜಾಬ್ ಆಫರ್: ಅರ್ಜಿ ಸಲ್ಲಿಸುವ ವಿವರ ತಿಳಿಯಿರಿ - Mahanayaka
8:10 AM Thursday 10 - September 2026

ಕೇಂದ್ರ ಸರ್ಕಾರದಿಂದ ಪಿಯುಸಿ ಪಾಸಾದವರಿಗೆ ಭರ್ಜರಿ 2006 ಜಾಬ್ ಆಫರ್: ಅರ್ಜಿ ಸಲ್ಲಿಸುವ ವಿವರ ತಿಳಿಯಿರಿ

ssc stenographer
16/08/2024

SSC Stenographer Recruitment 2024 — ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗವು ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳ ಅಡಿಯಲ್ಲಿ ಖಾಲಿ ಇರುವಂತಹ ಸ್ಟೆನೋಗ್ರಾಫರ್ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆ ಪ್ರಕಟಗೊಳಿಸಿದೆ. ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಕೇವಲ ದ್ವಿತೀಯ ಪಿಯುಸಿ ಪಾಸ್ ಆಗಿದ್ದರೆ ಸಾಕು ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ನಿಗದಿಸಿದ ಸಂಪೂರ್ಣ ಅರ್ಹತೆಗಳ ವಿವರಗಳನ್ನು ಹಾಗೂ ಅರ್ಜಿ ಸಲ್ಲಿಸುವ ಸಂಪೂರ್ಣ ಮಾಹಿತಿಯನ್ನು ಕೆಳಗಿನ ಭಾಗದಲ್ಲಿ ನಾವು ವಿವರಿಸಿದ್ದು, ಅರ್ಜಿ ಸಲ್ಲಿಸುವವರು ಹಾಗೂ ಕೇಂದ್ರ ಸರ್ಕಾರ ಉದ್ಯೋಗ ನಿರೀಕ್ಷೆಯಲ್ಲಿರುವವರು ಈ ಒಂದು ಸುವರ್ಣ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಕೇಂದ್ರ ಸರ್ಕಾರದ ಉದ್ಯೋಗವನ್ನು ನಿಮ್ಮದಾಗಿಸಿಕೊಳ್ಳಿ.

ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು :

ಸ್ಟೇನೋಗ್ರಾಫರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ಮಾನ್ಯತೆ ಪಡೆದ ಶಿಕ್ಷಣ ಮಂಡಳಿಯಿಂದ 12ನೇ ತರಗತಿ ಪಾಸ್ ಆಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಇದರ ಜೊತೆಗೆ ಅರ್ಜಿ ಸಲ್ಲಿಸುವವರಿಗೆ ಟೈಪಿಂಗ್ ಜ್ಞಾನ ಇರಬೇಕು.

ವಯೋಮಿತಿ ಅರ್ಹತೆ — ಅರ್ಜಿ ಸಲ್ಲಿಸಲು ಅಧಿಸೂಚನೆಯಲ್ಲಿ ತಿಳಿಸಿರುವಂತೆ ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ ವಯೋಮಿತಿಯನ್ನು 30 ವರ್ಷಕ್ಕೆ ನಿಗದಿಪಡಿಸಲಾಗಿದೆ. ವಿವಿಧ ವರ್ಗದವರಿಗೆ ವಯೋಮಿತಿ ಸಡದಿಕೆ ನೀಡಲಾಗಿದ್ದು ಕೆಳಗಿನಂತಿದೆ.

* ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಮೂರು ವರ್ಷ ಸಡಿಲಿಕೆ

* ಪರಿಶಿಷ್ಟ ವರ್ಗಗಳ ಅಭ್ಯರ್ಥಿಗಳಿಗೆ ಐದು ವರ್ಷಗಳ ಸಡಲಿಕೆ

* ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ಸಡಿಲಿಕೆ

ಅರ್ಜಿ ಶುಲ್ಕ : ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಾಗೂ ಎಲ್ಲಾ ವರ್ಗದ ಅಂಗವಿಕಲ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ಸಂಪೂರ್ಣ ವಿನಾಯಿತಿ ನೀಡಲಾಗಿದೆ. ಇವರನ್ನು ಹೊರತುಪಡಿಸಿ ಉಳಿದ ವರ್ಗದವರು 100 ರೂಪಾಯಿ ಅರ್ಜಿ ಶುಲ್ಕವನ್ನು ಪಾವತಿಸಿ ಅರ್ಜಿ ಸಲ್ಲಿಸಬೇಕು.

ಸ್ಟೇನೊಗ್ರಾಫರ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಹೇಗೆ ಆಯ್ಕೆ ಮಾಡಿಕೊಳ್ಳಲಾಗುವುದು?

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಮೊದಲು ಕಂಪ್ಯೂಟರ್ ಆಧಾರಿತ ಪರೀಕ್ಷೆಯನ್ನು ನಡೆಸಲಾಗುವುದು. ಇದರ ನಂತರ ಅಭ್ಯರ್ಥಿಗಳಿಗೆ ಸ್ಕಿಲ್ ಟೆಸ್ಟ್ ಹಾಗೂ ದಾಖಲೆ ಪರಿಶೀಲನೆ ನಡೆಸಿ ಆಯ್ಕೆ ಮಾಡಿಕೊಳ್ಳಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಿದ್ದಾರೆ.

ನೇಮಕಾತಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ — 17ನೇ ಆಗಸ್ಟ್ 2024

ಅರ್ಜಿ ಸಲ್ಲಿಸುವ ಲಿಂಕ್ – https://ssc.gov.in/login


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ

mobil chat sitesi Ucuz Uçak Bileti