3:10 PM Wednesday 10 - December 2025

SSLC ಪರೀಕ್ಷೆ ಫಲಿತಾಂಶ ಪ್ರಕಟ: ಈ ಬಾರಿಯೂ ಬಾಲಕಿಯರದ್ದೇ ಮೇಲುಗೈ: ಪ್ರಥಮ ಸ್ಥಾನ ಪಡೆದ ಜಿಲ್ಲೆ ಯಾವುದು?

s.s .lc
08/05/2023

ಬೆಂಗಳೂರು: 2022–23ನೇ ಸಾಲಿನ SSLC ವಾರ್ಷಿಕ ಪರೀಕ್ಷೆಯ ಫಲಿತಾಂಶ ಸೋಮವಾರ ಪ್ರಕಟವಾಗಿದ್ದು, ಎಂದಿನಂತೆ ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.

ಈ ಬಾರಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಒಟ್ಟು ಶೇಕಡಾ 83.89ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಪರೀಕ್ಷೆ ಬರೆದ ಒಟ್ಟು 8,35,102 ವಿದ್ಯಾರ್ಥಿಗಳ ಪೈಕಿ 7,00,619 ವಿದ್ಯಾರ್ಥಿಗಳು ಪಾಸಾಗಿದ್ದಾರೆ. ನಾಲ್ವರು ವಿದ್ಯಾರ್ಥಿಗಳು 625ಕ್ಕೆ 625 ಅಂಕ ಪಡೆದು ರಾಜ್ಯಕ್ಕೆ ಮೊದಲ ಸ್ಥಾನ ಗಳಿಸಿದ್ದಾರೆ.

ಒಟ್ಟು 3,41,108 ಬಾಲಕರು ಹಾಗೂ 3,59,511 ಬಾಲಕಿಯರು ಉತ್ತೀರ್ಣರಾಗಿದ್ದಾರೆ. ಈ ಬಾರಿ ಚಿತ್ರದುರ್ಗ ಜಿಲ್ಲೆ ಶೇಕಡಾ 96.08ರಷ್ಟು ಫಲಿತಾಂಶದೊಂದಿಗೆ ರಾಜ್ಯಕ್ಕೆ ಮೊದಲ ಸ್ಥಾನ ಪಡೆದಿದೆ.

ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶದಲ್ಲಿ ಮಂಡ್ಯ ಜಿಲ್ಲೆ ಎರಡನೇ ಸ್ಥಾನ ಪಡೆದಿದ್ದು, ಹಾಸನ ಜಿಲ್ಲೆ ಮೂರನೇ ಸ್ಥಾನ ಗಳಿಸಿದೆ. ಯಾದಗಿರಿ ಜಿಲ್ಲೆ ಕೊನೆಯ ಸ್ಥಾನ ಪಡೆದಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JdaVhZJabeA0V7XQ5ZJp92

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version