SSLC ಪರೀಕ್ಷೆ ಫಲಿತಾಂಶ ಪ್ರಕಟ: ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನ - Mahanayaka

SSLC ಪರೀಕ್ಷೆ ಫಲಿತಾಂಶ ಪ್ರಕಟ: ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನ

sslc
09/05/2024


Provided by

ಬೆಂಗಳೂರು: 2023–24ನೇ ಸಾಲಿನ SSLC ಪರೀಕ್ಷೆಯ ಫಲಿತಾಂಶ  ಪ್ರಕಟವಾಗಿದ್ದು, ಶೇ. 73.4 ಮಂದಿ ಉತ್ತೀರ್ಣರಾಗಿದ್ದಾರೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಬೆಂಗಳೂರಿನ ಮಲ್ಲೇಶ್ವರಂನ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿತು.

ಈ ಬಾರಿ ಎಸ್ ಎಸ್ ​ಎಲ್ ​ಸಿ ಪರೀಕ್ಷೆಯಲ್ಲಿ ಒಟ್ಟು 8,59,967 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 6,31,204 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಎಸ್​ಎಸ್​ಎಲ್​ಸಿ ಪರೀಕ್ಷೆಯಲ್ಲಿ ಈ ಬಾರಿಯೂ ಬಾಲಕಿಯರದ್ದೇ ಮೈಲುಗೈಯಾಗಿದೆ.

ಈ ಬಾರಿ 441910 ವಿದ್ಯಾರ್ಥಿಗಳು, 428058 ವಿದ್ಯಾರ್ಥಿನಿಯರು ಪರೀಕ್ಷೆ ಬರೆದಿದ್ದರು. 2,87,416 ಮಂದಿ ಬಾಲಕರು ತೇರ್ಗಡೆಯಾಗಿದ್ದು, ತೇರ್ಗಡೆ ಪ್ರಮಾಣ ಶೇ 65.90 ಇದೆ. 3,43,788 ಬಾಲಕಿಯರು ತೇರ್ಗಡೆಯಾಗಿದ್ದು, ತೇರ್ಗಡೆ ಪ್ರಮಾಣ ಶೇ 81.11 ಇದೆ.

ಈ ಬಾರಿ ಉಡುಪಿ ಜಿಲ್ಲೆಗೆ ಮೊದಲ ಸ್ಥಾನ ದೊರೆತಿದ್ದರೆ ಯಾದಗಿರಿ ಜಿಲ್ಲೆಗೆ ಕೊನೆಯ ಸ್ಥಾನ ದೊರೆತಿದೆ. ಉಡುಪಿ ಜಿಲ್ಲೆಯಲ್ಲಿ ಶೇ 94ರ ಫಲಿತಾಂಶ ದಾಖಲಾಗಿದೆ.  ಬಾಗಲಕೋಟೆಯ ಅಂಕಿತಾ ಬಸಪ್ಪ ಕೊನ್ನೂರು 625ಕ್ಕೆ 625 ಅಂಕ ಪಡೆದು ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆ ಶೇ 92.12, ಶಿವಮೊಗ್ಗ ಜಿಲ್ಲೆ ಶೇ 88.67, ಕೊಡಗು ಜಿಲ್ಲೆ ಶೇ 88.67 ರ ಫಲಿತಾಂಶ ದಾಖಲಿಸಿವೆ. ಉತ್ತರ ಕನ್ನಡ 86.54%, ಹಾಸನ 86.28%, ಮೈಸೂರು 85.5%, ಶಿರಸಿ 84.64%, ಬೆಂಗಳೂರು ಗ್ರಾ. 83.67%, ಚಿಕ್ಕಮಗಳೂರು 83.39%, ವಿಜಯಪುರ 79.82%, ಬೆಂಗಳೂರು ದಕ್ಷಿಣ 79%, ಬಾಗಲಕೋಟೆ 77.92%, ಬೆಂಗಳೂರು ಉತ್ತರ 77.09%, ಹಾವೇರಿ 75.85%, ತುಮಕೂರು 75.16%, ಗದಗ 74.76%, ಚಿಕ್ಕಬಳ್ಳಾಪುರ 73.61%, ಮಂಡ್ಯ 73.59%, ಕೋಲಾರ 73.57%, ಚಿತ್ರದುರ್ಗ 72.85%, ಧಾರವಾಡ 72.67%, ದಾವಣಗೆರೆ 72.49%, ಚಾಮರಾಜನಗರ 71.59%, ಚಿಕ್ಕೋಡಿ 69.82%, ರಾಮನಗರ 69.53%, ವಿಜಯನಗರ 65.61%, ಬಳ್ಳಾರಿ 64.99%, ಬೆಳಗಾವಿ 64.93%, ಮಧುಗಿರಿ 62.44%, ರಾಯಚೂರು 61.2%, ಕೊಪ್ಪಳ 61.16%, ಬೀದರ್ 57.52%, ಕಲಬುರಗಿ 53.04% ಫಲಿತಾಂಶ ದಾಖಲಾಗಿದೆ.

ಫಲಿತಾಂಶ ನೋಡುವುದು ಹೇಗೆ?

ಎಸ್‌ ಎಸ್‌ ಎಲ್‌ ಸಿ ಪರೀಕ್ಷೆಯ ಫಲಿತಾಂಶವನ್ನು https://karresults.nic.in ವೆಬ್ ಸೈಟ್ ಗೆ ಭೇಟಿ ನೀಡುವ ಮೂಲಕ ವೀಕ್ಷಿಸಬಹುದಾಗಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ