SSLC ಪರೀಕ್ಷೆಫಲಿತಾಂಶ ಪ್ರಕಟ: ಶೇ 94.1 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ, ಬಾಲಕಿಯರದೇ ಮೇಲುಗೈ
ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶವನ್ನು ಅಧಿಕೃತವಾಗಿ ಪ್ರಕಟಿಸಿದೆ. ಈ ಬಾರಿ ಒಟ್ಟು ಶೇ 94.1 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಉತ್ತಮ ಸಾಧನೆ ಮಾಡಿದ್ದಾರೆ.
ಈ ವರ್ಷ ಪರೀಕ್ಷೆಗೆ ಹಾಜರಾಗಿದ್ದ ಒಟ್ಟು 7,70,209 ವಿದ್ಯಾರ್ಥಿಗಳ ಪೈಕಿ 7,24,794 ಮಂದಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ.
ಪ್ರತಿ ಬಾರಿಯಂತೆ ಈ ಬಾರಿಯೂ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದಾರೆ. ಬಾಲಕಿಯರ ಉತ್ತೀರ್ಣ ಪ್ರಮಾಣ ಶೇ 96.18 ರಷ್ಟಿದ್ದರೆ, ಬಾಲಕರ ಪ್ರಮಾಣ ಶೇ 91.94 ರಷ್ಟಿದೆ.
ದಕ್ಷಿಣ ಕನ್ನಡ ಜಿಲ್ಲೆಯು ಶೇ 98.40 ಫಲಿತಾಂಶದೊಂದಿಗೆ ರಾಜ್ಯಕ್ಕೇ ಪ್ರಥಮ ಸ್ಥಾನ ಪಡೆದಿದೆ. ಉಡುಪಿ (ಶೇ 98.18) ಮತ್ತು ಉತ್ತರ ಕನ್ನಡ (ಶೇ 98.09) ಜಿಲ್ಲೆಗಳು ನಂತರದ ಸ್ಥಾನಗಳಲ್ಲಿವೆ. ಕಲಬುರಗಿ (ಶೇ 85.06) ಜಿಲ್ಲೆಯು ಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ.
ಮಾರ್ಚ್ 18ರಿಂದ ಏಪ್ರಿಲ್ 2ರ ವರೆಗೆ ರಾಜ್ಯದಾದ್ಯಂತ 2,870 ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗಿತ್ತು. ಮಂಡಳಿಯು ಅತ್ಯಂತ ಶೀಘ್ರವಾಗಿ ಮೌಲ್ಯಮಾಪನ ಪ್ರಕ್ರಿಯೆ ಮುಗಿಸಿ ಫಲಿತಾಂಶ ಪ್ರಕಟಿಸಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD























