SSLC ಪರೀಕ್ಷೆ ದಿನಾಂಕ ಪ್ರಕಟ ಯಾವಾಗ? - Mahanayaka
5:00 AM Saturday 17 - January 2026

SSLC ಪರೀಕ್ಷೆ ದಿನಾಂಕ ಪ್ರಕಟ ಯಾವಾಗ?

sslc exam
27/06/2021

ಬೆಂಗಳೂರು:  ಎಸೆಸೆಲ್ಸಿ ಪರೀಕ್ಷೆಗೆ ನಾಳೆ ದಿನಾಂಕ ಪ್ರಕಟವಾಗುವ ಸಾಧ್ಯತೆಗಳಿವೆ ಎಂದು ವರದಿಯಾಗಿದ್ದು, ಈ ಬಗ್ಗೆ ನಾಳೆ ನಡೆಯುವ ಸಭೆಯಲ್ಲಿ ಶಿಕ್ಷಣ ಸಚಿವರು ದಿನಾಂಕ ಘೋಷಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ನೇತೃತ್ವದಲ್ಲಿ ನಾಳೆ ಮಹತ್ವದ ಸಭೆ ನಡೆಯಲಿದ್ದು, ಸಭೆಯಲ್ಲಿ ಪರೀಕ್ಷೆಯ ದಿನಾಂಕ ನಿಗದಿ ಕುರಿತಂತೆ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಸಭೆಯಲ್ಲಿ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು, ಪೊಲೀಸ್ ಅಧೀಕ್ಷಕರು ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ರಾಜ್ಯ ಮಟ್ಟದ ಅಧಿಕಾರಿಗಳು ಭಾಗಿಯಾಗಲಿದ್ದಾರೆ ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ