12:37 PM Saturday 18 - October 2025

ಎಸೆಸೆಲ್ಸಿ ಪಾಸ್ ಆದ ಎಸ್ಟಿ, ಎಸ್ಟಿ ವಿದ್ಯಾರ್ಥಿಗಳ ಸ್ಕಾಲರ್ ಶಿಪ್ ಗಾಗಿ 35 ಸಾವಿರ ಕೋಟಿ ಅನುದಾನ

01/02/2021

ನವದೆಹಲಿ: ಪರಿಶಿಷ್ಟ ಜಾತಿ(ಎಸ್ಸಿ) ಹಾಗೂ ಪರಿಶಿಷ್ಟ ಪಂಗಡ(ಎಸ್ಟಿ)  ಸಮುದಾಯದ ಎಸೆಸೆಲ್ಸಿ ವಿದ್ಯಾರ್ಥಿಗಳಿಗೆ  ಸ್ಕಾಲರ್ ಶಿಪ್ ಹಾಗೂ ಹೊಸ ವಸತಿ ಶಾಲೆಗಳನ್ನು  ಬಜೆಟ್ ನಲ್ಲಿ ಘೋಷಿಸಲಾಗಿದೆ.

ಇಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಬಜೆಟ್ ನಲ್ಲಿ ಈ ವಿಚಾರ ಪ್ರಸ್ತಾಪಿಸಲಾಗಿದೆ. ಎಸ್ಸಿ, ಎಸ್ಟಿ ಸಮುದಾಯದ ವಿದ್ಯಾರ್ಥಿಗಳ ಅಭಿವೃದ್ಧಿಗೆ ಬುಡಕಟ್ಟು ಪ್ರದೇಶಗಳಲ್ಲಿ 750 ಹೊಸ ವಸತಿ ಶಾಲೆ ಆರಂಭಿಸಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಹೇಳಿದರು.

ಇನ್ನೂ 10ನೇ ತರಗತಿ ಪಾಸ್ ಆಗಿರುವ ಎಸ್ಸಿ, ಎಸ್ಟಿ ಸಮುದಾಯದ ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್ ಘೋಷಿಸಲಾಗಿದ್ದು, ಇದಕ್ಕಾಗಿ  35 ಸಾವಿರ ಕೋಟಿ ಅನುದಾನ ಘೋಷಿಸಲಾಗಿದೆ.

ಇತ್ತೀಚಿನ ಸುದ್ದಿ

Exit mobile version