ಎಸೆಸೆಲ್ಸಿ ಫಲಿತಾಂಶ: ಗ್ರಾಮೀಣದವರೇ ಹೆಚ್ಚು ಪಾಸ್ | ಈ ಬಾರಿ ಶೇ 83.89 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ

sslc
08/05/2023

ಬೆಂಗಳೂರು: 8 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು, ಪೋಷಕರು ಎದುರು ನೋಡುತ್ತಿದ್ದ 10ನೇ ತರಗತಿ ಬೋರ್ಡ್​ ಎಕ್ಸಾಂ ರಿಸಲ್ಟ್​ (10th Board Result 2023) ಹೊರಬಿದ್ದಿದೆ. ರಾಜ್ಯದ ಪಾಲಿಗೆ ಈ ಫಲಿತಾಂಶ ಹಿನ್ನಡೆಯಾಗಿದೆ. ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಫಲಿತಾಂಶ ಬಿಡುಗಡೆಯಾಗಿದ್ದು, ಈ ಬಾರಿ ಶೇ 83.89 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಕಳೆದ ವರ್ಷಕ್ಕಿಂತ ಈ ಬಾರಿ ಫಲಿತಾಂಶ ಕುಸಿತ ಕಂಡಿದೆ. ಕಳೆದ ವರ್ಷ ಶೇ 85.13 ಫಲಿತಾಂಶ ಬಂದಿತ್ತು.

ಪರೀಕ್ಷಾ ಮಂಡಳಿಯು ಕರ್ನಾಟಕ SSLC ಪರೀಕ್ಷೆಗಳನ್ನು 2023 ಮಾರ್ಚ್ 31 ರಿಂದ ಏಪ್ರಿಲ್ 15ರ ವರೆಗೆ ನಡೆಸಿದೆ. ಕರ್ನಾಟಕ ಎಸ್‌ಎಸ್‌ಎಲ್‌ಸಿ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಪ್ರಕ್ರಿಯೆಯು ಏಪ್ರಿಲ್ 21 ರಂದು ಆರಂಭವಾಗಿತ್ತು. ಮೌಲ್ಯ ಮಾಪನ ಮುಕ್ತಾಯವಾಗಿ ಇಂದು ರಿಸಲ್ಟ್​​ ಬಿಡುಗಡೆಯಾಗಿದೆ. ಮಾರ್ಚ್​ 31 ರಿಂದ ವಿದ್ಯಾರ್ಥಿಗಳಿಗೆ ಪರೀಕ್ಷೆ ಆರಂಭವಾಗಿತ್ತು. ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟವಾಗಿದೆ. ಈ ಬಾರಿ ಗ್ರಾಮೀಣ ವಿದ್ಯಾರ್ಥಿಗಳೇ ಹೆಚ್ಚಿನ ಅಂಕ ಗಳಿಸಿದ್ದಾರೆ.

ಈ ಬಾರಿ ಕೇವಲ 4 ವಿದ್ಯಾರ್ಥಿಗಳು ಮಾತ್ರ 625ಕ್ಕೆ 625 ಅಂಕ ಪಡೆದಿದ್ದಾರೆ. ನಗರದ ಬಾಗದ ವಿದ್ಯಾರ್ಥಿಗಳು ಫಲಿತಾಂಶ ಶೇ 79.62ರಷ್ಟು ದಾಖಲಾಗಿದೆ. ಇದಕ್ಕಿಂತ ಗ್ರಾಮೀಣ ವಿದ್ಯಾರ್ಥಿಗಳು ಹೆಚ್ಚಿನ ಜನ ಉತ್ತೀರ್ಣರಾಗಿದ್ದಾರೆ. ಅಂಕಿ ಅಂಶಗಳ ಪ್ರಕಾರಶೇ,87.00 ರಷ್ಟು ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಇದರಿಂದ ನಗರ ಭಾಗದ ವಿದ್ಯಾರ್ಥಿಗಳಿಗಿಂತ ಗ್ರಾಮೀಣ ವಿಭಾಗದ ವಿದ್ಯಾರ್ಥಿಗಳು ಉತ್ತಮ ಫಲಿತಾಂಶ ಪಡೆದಿದ್ದಾರೆ. ಒಟ್ಟು 34 ಶಾಲೆಗಳಲ್ಲಿ ಶೂನ್ಯ ಫಲಿತಾಂಶ ದಾಖಲಾಗಿದೆ. ಇದು ಕಳೆದ ವರ್ಷದ ಅಂಕಿಅಂಶಗಳಿಗಿಂತ ಭಾರೀ ಕುಸಿತವಾಗಿದೆ. 2022ರಲ್ಲಿ 145 ವಿದ್ಯಾರ್ಥಿಗಳು ಪರಿಪೂರ್ಣ ಅಂಕ ಗಳಿಸಿದ್ದರು.

34 ಶಾಲೆಗಳಲ್ಲಿ ಶೂನ್ಯ ಫಲಿತಾಂಶ:

ಇನ್ನು ಒಟ್ಟು 34 ಶಾಲೆಗಳಲ್ಲಿ ಶೂನ್ಯ ಫಲಿತಾಂಶ ಬಂದಿರುವುದು ನಿರಾಶಾದಾಯಕವಾಗಿದೆ. ಇದರ ಮಧ್ಯೆ ಸಮಾಧಾನಕರ ಸುದ್ದಿ ಎಂದರೆ ಯಾವುದೇ ಸರ್ಕಾರಿ ಶಾಲೆಗಳು ಶೂನ್ಯ ಶೇಕಡಾ ಫಲಿತಾಂಶವನ್ನು ಪಡೆದಿಲ್ಲ. ಇನ್ನು ಈ ಬಾರಿಯೂ ಫಲಿತಾಂಶ ದಲ್ಲಿ ಹೆಣ್ಣು ಮಕ್ಕಳೇ ಮೇಲುಗೈ ಸಾಧಿಸಿದ್ದಾರೆ.  ಶೇ ,87.87 ರಷ್ಟು ಹೆಣ್ಣು ಮಕ್ಕಳು ಪಾಸ್​​ ಆಗಿದ್ದರೆ,  ಶೇ. 80.08 ರಷ್ಟು ಗಂಡು ಮಕ್ಕಳು ಉತ್ತೀರ್ಣರಾಗಿದ್ದಾರೆ.

ಗ್ರಾಮೀಣ-ನಗರ ವಿದ್ಯಾರ್ಥಿಗಳ ಫಲಿತಾಂಶ:

ಶೇ 87.00 ರಷ್ಟು ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದರೆ, ನಗರದ ಭಾಗದ ವಿದ್ಯಾರ್ಥಿಗಳು ಫಲಿತಾಂಶ ಶೇ 79.62ರಷ್ಟಿದೆ. ಒಟ್ಟಾರೆ  ಎಸ್​ಎಸ್​ಎಲ್​ಸಿ ಪರೀಕ್ಷೆಯಲ್ಲಿ 7,00,619 ವಿದ್ಯಾರ್ಥಿಗಳು ಪಾಸಾಗಿದ್ದಾರೆ. 3,41,108 ಬಾಲಕರು ಹಾಗೂ  3,59,511 ಬಾಲಕಿಯರು ಈ ವರ್ಷ 10ನೇ ಕ್ಲಾಸ್​ ಬೋರ್ಡ್​ ಎಕ್ಸಾಮ್​ ನಲ್ಲಿ ಉತ್ತೀರ್ಣಾಗಿದ್ದಾರೆ.

ಯಾದಗಿರಿ ಲಾಸ್ಟ್​, ಚಿತ್ರದುರ್ಗ ಫಸ್ಟ್​:

ರಾಜ್ಯಕ್ಕೇ ಯಾದಗಿರಿ ಜಿಲ್ಲೆ ಶೇ.75.49ರಷ್ಟು ಫಲಿತಾಂಶದೊಂದಿಗೆ ಕೊನೆಯ ಸ್ಥಾನ ಪಡೆದಿದೆ. SSLC ಪರೀಕ್ಷೆ ಫಲಿತಾಂಶದಲ್ಲಿ ಚಿತ್ರದುರ್ಗ ಜಿಲ್ಲೆ ಶೇಕಡಾ 96.08ರಷ್ಟು ಫಲಿತಾಂಶ ಪಡೆದು ಪ್ರಥಮ ಸ್ಥಾನದಲ್ಲಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version