SSLC ಫಲಿತಾಂಶ: ಬಾಗಲಕೋಟೆ ಅಂಕಿತಾ 625ಕ್ಕೆ 625 ಅಂಕ ಪಡೆದ ಏಕೈಕ ವಿದ್ಯಾರ್ಥಿನಿ - Mahanayaka

SSLC ಫಲಿತಾಂಶ: ಬಾಗಲಕೋಟೆ ಅಂಕಿತಾ 625ಕ್ಕೆ 625 ಅಂಕ ಪಡೆದ ಏಕೈಕ ವಿದ್ಯಾರ್ಥಿನಿ

ankitha
09/05/2024

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಮಾ.25ರಿಂದ ಏ.6ರವರೆಗೆ ನಡೆಸಿದ 2023-24ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ-1ರ ಫಲಿತಾಂಶ ಇಂದು ಪ್ರಕಟವಾಗಿದೆ.

ಈ ಹಿಂದಿನಂತೆ ಈ ವರ್ಷವೂ ಕೂಡಾ ಬಾಲಕಿಯರೆ ಮೇಲು ಗೈ ಸಾಧಿಸಿದ್ದಾರೆ. ಈ ವರ್ಷದ ಎಸ್ಸೆಸ್ಸೆಲ್ಸಿ ಫಲಿತಾಂಶದ ವಿಶೇಷ ಎಂದರೆ ಒಬ್ಬಳೇ ವಿದ್ಯಾರ್ಥಿನಿ 625ಕ್ಕೆ 625 ಅಂಕವನ್ನು ಪಡೆದುಕೊಂಡಿದ್ದಾಳೆ.

ಬಾಗಲಕೋಟೆಯ ಮೆಳ್ಳಿಗೇರಿ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿನಿಯಾಗಿರುವ ಅಂಕಿತಾ ಬಸಪ್ಪ ಎನ್ನುವ ವಿದ್ಯಾರ್ಥಿನಿ 2023-24ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ ರಾಜ್ಯದಲ್ಲಿ 625ಕ್ಕೆ 625 ಅಂಕ ಪಡೆದ ಏಕೈಕ ವಿದ್ಯಾರ್ಥಿನಿಯಾಗಿದ್ದಾಳೆ.

7 ವಿದ್ಯಾರ್ಥಿಗಳಿಗೆ 625ಕ್ಕೆ 624 ಅಂಕಗಳು ಬಂದಿವೆ. ದಕ್ಷಿಣ ಕನ್ನಡದ ಚಿನ್ಮಯ್​ , ​ ಚಿಕ್ಕೊಡಿಯ ಸಿದ್ದಾಂತ್, ಮಧುಗಿರಿಯ ಹರ್ಷಿತಾ ಡಿ. ಎಂ, ಬೆಂಗಳೂರಿನ ವೇದಾ ಪಿ ಶೆಟ್ಟಿ, ಉಡುಪಿಯ ಸಹನಾ, ಶಿರಸಿಯ ದರ್ಶನ್​​, ಚಿನ್ಮಯ್​, ಸಿದ್ದಾಂತ್​ ಕೂಡಾ ದ್ವಿತೀಯ ಸ್ಥಾನದಲ್ಲಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:


Provided by

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ