ಎಸ್ ಎಸ್ ಎಲ್ ಸಿ -ದ್ವಿತೀಯ ಪಿಯುಸಿ ಪರೀಕ್ಷಾ ಅಂತಿಮ ವೇಳಾಪಟ್ಟ ಪ್ರಕಟ - Mahanayaka

ಎಸ್ ಎಸ್ ಎಲ್ ಸಿ –ದ್ವಿತೀಯ ಪಿಯುಸಿ ಪರೀಕ್ಷಾ ಅಂತಿಮ ವೇಳಾಪಟ್ಟ ಪ್ರಕಟ

exam
20/02/2024


Provided by

ಬೆಂಗಳೂರು: 2024–25ನೇ ಸಾಲಿನ ದ್ವಿತೀಯ ಪಿಯುಸಿ ಮತ್ತು ಎಸ್ ಎಸ್ ಎಲ್ ಸಿ ಪರೀಕ್ಷೆಗಳ ಅಂತಿಮ ವೇಳಾಪಟ್ಟಿ ಪ್ರಕಟವಾಗಿದೆ.

ವಿಕಾಸಸೌಧದಲ್ಲಿಂದು ಕರೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಪರೀಕ್ಷಾ ದಿನಾಂಕ ಹಾಗೂ ಪರೀಕ್ಷೆಗಳಿಗೆ ಸಂಬಂಧಪಟ್ಟ ಇತರ ಮಾಹಿತಿ ನೀಡಿದ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ, ದ್ವಿತೀಯ ಪಿಯುಸಿ ಪರೀಕ್ಷೆ ಮಾರ್ಚ್ 01 ರಿಂದ 22ರ ವರೆಗೆ ಹಾಗೂ ಎಸ್ ಎಸ್ ಎಲ್ ಸಿ ಪರೀಕ್ಷೆಗಳು ಮಾರ್ಚ್ 25 ರಿಂದ ಏಪ್ರಿಲ್ 06ರವರೆಗೆ ನಡೆಯಲಿವೆ ಎಂದು ತಿಳಿಸಿದರು.

ಈ ವರ್ಷ ರಾಜ್ಯದಲ್ಲಿ 8,96,271 ಮಕ್ಕಳು ಎಸ್ ಎಸ್ ಎಲ್ ಸಿ ಪರೀಕ್ಷೆ ಪರೀಕ್ಷೆ ಬರೆಯತ್ತಿದ್ದಾರೆ. 2,741 ಪರೀಕ್ಷಾ ಕೇಂದ್ರಗಳಿವೆ. ಇನ್ನು 6,98, 624 ಮಕ್ಕಳು ದ್ವೀತಿಯ ಪಿಯುಸಿ ಪರೀಕ್ಷೆ ಬರೆಯುತ್ತಿದ್ದಾರೆ.

ಕಳೆದ ವರ್ಷದಿಂದ ದ್ವಿತೀಯ ಪಿಯುಸಿ ಪರೀಕ್ಷೆ 80-20 ಮಾದರಿಯಲ್ಲಿ ಇರುತ್ತದೆ. ವಿದ್ಯಾರ್ಥಿಗಳು ಲಖಿತ ರೂಪದಲ್ಲಿ 80 ಅಂಕಗಳಿಗೆ ಪರೀಕ್ಷೆ ಬರೆಯುತ್ತಾರೆ. ಇನ್ನು ಉಳಿದ 20 ಅಂಕಗಳು ಆಂತರಿಕ ಮೌಲ್ಯಮಾಪನದ ಮೂಲಕ ನೀಡಲಾಗುತ್ತದೆ. ದ್ವಿತೀಯ ಪಿಯುಸಿ ಪರೀಕ್ಷೆ-2 ಅನ್ನು ಹಾಗೂ ಎಸ್ ಎಸ್ಎಲ್ಸಿ ಪರೀಕ್ಷೆ-2 ನ್ನು ಎಪ್ರಿಲ್ ಕೊನೆಯ ವಾರದಲ್ಲಿ ನಡೆಸುತ್ತೇವೆ ಎಂದು ಸಚಿವರು ತಿಳಿಸಿದರು.

ಇತ್ತೀಚಿನ ಸುದ್ದಿ