SSLC ವಿದ್ಯಾರ್ಥಿನಿ ಹೃದಯಾಘಾತಕ್ಕೆ ಬಲಿ!

27/01/2025
ಮೈಸೂರು: SSLC ವಿದ್ಯಾರ್ಥಿನಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ಪಿರಿಯಾಪಟ್ಟಣ ತಾಲೂಕಿನ ಕೆಲ್ಲೂರು ಗ್ರಾಮದಲ್ಲಿ ನಡೆದಿದೆ.
ನಾಗರಾಜ್ , ವಸಂತ ದಂಪತಿ ಪುತ್ರಿ ದೀಪಿಕಾ(15) ಮೃತಪಟ್ಟ ವಿದ್ಯಾರ್ಥಿನಿ ಎಂದು ತಿಳಿದು ಬಂದಿದೆ. ಭಾನುವಾರ ಏಕಾಏಕಿ ಅಸ್ವಸ್ಥಳಾದ ದೀಪಿಕಾಳನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅಷ್ಟರಲ್ಲೇ ದೀಪಿಕಾ ಕೊನೆಯುಸಿರೆಳೆದಿದ್ದಳು.
ರಾವಂದೂರು ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ದೀಪಿಕಾ SSLC ವಿದ್ಯಾರ್ಥಿನಿಯಾಗಿ ವ್ಯಾಸಂಗ ನಡೆಸುತ್ತಿದ್ದಳು. ಇದೀಗ ಮಗಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಹದಿಹರೆಯದ ಮಕ್ಕಳೇ ಹೃದಯಾಘಾತಕ್ಕೆ ಬಲಿಯಾಗ್ತಿರೋದು ಆತಂಕಕ್ಕೆ ಕಾರಣವಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/HEkqDgrW2BlJLad5kZ1DX7