10:28 PM Tuesday 23 - December 2025

ಬಸ್ ಚಾಲಕನಿಂದ ಲೈಂಗಿಕ ದೌರ್ಜನ್ಯ: ಮಗುವಿಗೆ ಜನ್ಮ ನೀಡಿದ SSLC ವಿದ್ಯಾರ್ಥಿನಿ

pocso act
23/12/2025

ಹಾಸನ: ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನಲ್ಲಿ ಆಘಾತಕಾರಿ ಘಟನೆಯೊಂದು ತಡವಾಗಿ ಬೆಳಕಿಗೆ ಬಂದಿದೆ. ಖಾಸಗಿ ಶಾಲೆಯೊಂದರಲ್ಲಿ 10ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ಅಪ್ರಾಪ್ತ ವಿದ್ಯಾರ್ಥಿನಿಯೊಬ್ಬಳು ಶಾಲಾ ಬಸ್ ಚಾಲಕನ ಲೈಂಗಿಕ ದೌರ್ಜನ್ಯದಿಂದಾಗಿ  ಹೆಣ್ಣುಮಗುವೊಂದಕ್ಕೆ ಜನ್ಮ ನೀಡಿದ್ದಾಳೆ.

ಬರಗೂರು ಗ್ರಾಮದ ರಂಜನ್ ಎಂಬಾತ ಈ ಕೃತ್ಯವೆಸಗಿದ ಆರೋಪಿ. ಈತ ಅದೇ ಖಾಸಗಿ ಶಾಲೆಯಲ್ಲಿ ಬಸ್ ಚಾಲಕನಾಗಿ ಕೆಲಸ ಮಾಡುತ್ತಿದ್ದನು. ಪ್ರತಿದಿನ ಶಾಲಾ ವಾಹನದಲ್ಲಿ ಬರುತ್ತಿದ್ದ ಬಾಲಕಿಗೆ ಚಾಕೊಲೇಟ್ ನೀಡಿ ಪುಸಲಾಯಿಸುತ್ತಿದ್ದ ಆರೋಪಿಯು, ಆಕೆಯನ್ನು ಶ್ರವಣಬೆಳಗೊಳಕ್ಕೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದ ಎನ್ನಲಾಗಿದೆ. ಇದರ ಪರಿಣಾಮವಾಗಿ ಬಾಲಕಿ ಗರ್ಭಿಣಿಯಾಗಿದ್ದು, ಎರಡು ದಿನಗಳ ಹಿಂದೆ ಮಗುವಿಗೆ ಜನ್ಮ ನೀಡಿದ್ದಾಳೆ.

ವಿಷಯ ತಿಳಿಯುತ್ತಿದ್ದಂತೆಯೇ ಆರೋಪಿ ರಂಜನ್ ತಲೆಮರೆಸಿಕೊಂಡಿದ್ದಾನೆ. ಈ ಸಂಬಂಧ ನುಗ್ಗೇಹಳ್ಳಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ (POCSO) ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ

Exit mobile version