ಅಡ್ಡಮತದಾನ ಮಾಡಿ ಬಿಜೆಪಿ—ಜೆಡಿಎಸ್ ಗೆ ಶಾಕ್ ನೀಡಿದ ಎಸ್‌.ಟಿ. ಸೋಮಶೇಖರ್

st somashekhar
27/02/2024

ಬೆಂಗಳೂರು: ಯಶವಂತಪುರ ಬಿಜೆಪಿ ಶಾಸಕ ಎಸ್‌.ಟಿ. ಸೋಮಶೇಖರ್ ಅವರು ಅಡ್ಡ ಮತದಾನ ಮೂಲಕ ಮೂಲಕ ಬಿಜೆಪಿ ಹಾಗೂ ಜೆಡಿಎಸ್‌ ಬಿಗ್‌ ಶಾಕ್‌ ನೀಡಿದ್ದಾರೆ.

ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿ ಶಾಸಕ ಎಸ್‌.ಸಿ. ಸೋಮಶೇಖರ್‌ ಕಾಂಗ್ರೆಸ್‌ ಅಭ್ಯರ್ಥಿಗಳಿಗೆ ಮತ ಚಲಾಯಿಸಿದ್ದಾರೆಂದು ತಿಳಿದುಬಂದಿದೆ.

ಇನ್ನೂ ಎಸ್‌. ಟಿ. ಸೋಮಶೇಖರ್‌ ಅವರು ಕಾಂಗ್ರೆಸ್‌ ಗೆ ಅಡ್ಡ ಮತದಾನ ಮಾಡಿದ್ದಾರೆ ಎಂದು ಬಿಜೆಪಿ ಚುನಾವಣಾ ಏಜೆಂಟ್‌ ರೊಬ್ಬರು ಖಚಿತಪಡಿಸಿದ್ದಾರೆ.

ಮತದಾನಕ್ಕೂ ಮೊದಲು ಮಾಧ್ಯಮಗಳ ಜೊತೆಗೆ ಮಾತನಾಡಿದ್ದ ಎಸ್.ಟಿ.ಸೋಮಶೇಖರ್, 11 ವರ್ಷದಿಂದ ಎಲ್ಲರಿಗೂ ಮತ ಹಾಕಿದ್ದೇನೆ. ಆದರೆ, ರಾಜ್ಯಸಭೆಗೆ ಆಯ್ಕೆ ಆದವರು ಒಂದು ರೂಪಾಯಿ ಅನುದಾನವನ್ನೂ ಕೊಟ್ಟಿಲ್ಲ. ನೇರ ನೇರ ಹೇಳುತ್ತೇನೆ, ನಾನು ಈ ಬಾರಿ ಆತ್ಮಸಾಕ್ಷಿಯಂತೆ ಮತ ಹಾಕುತ್ತೇನೆ ಎಂದಿದ್ದರು.

ಕಳೆದ ಬಾರಿ ನಿರ್ಮಲಾ ಸೀತಾರಾಮನ್ ಅವರಿಗೆ ಮತಚಲಾಯಿಸಿದ್ದೆ, ಆದರೆ ಅವರು ನನಗೆ ಭೇಟಿಗೆ ಅಪಾಯಿಟ್ಮೆಂಟ್ ಕೂಡ ಕೊಡಲೇ ಇಲ್ಲ ಎಂದು ಬೇಸರ ಹೊರ ಹಾಕಿದ್ದರು.


ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ.

ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/DX0jBN1UDJAJ6ORoqqqFkD

ಇತ್ತೀಚಿನ ಸುದ್ದಿ

Exit mobile version