10:47 PM Wednesday 15 - October 2025

ಸಚಿವ ಎಸ್.ಟಿ.ಸೋಮಶೇಖರ್ ಪುತ್ರನ ಬ್ಲ್ಯಾಕ್ ಮೇಲ್: ಆರೋಪಿ ರಾಹುಲ್ ಭಟ್ ಸಿಸಿಬಿ ವಶಕ್ಕೆ

Rahul bhat
10/01/2022

ಬೆಂಗಳೂರು: ಸಚಿವ ಎಸ್.ಟಿ.ಸೋಮಶೇಖರ್ ಅವರ ಪುತ್ರ ನಿಶಾಂತ್ ಅವರನ್ನು ಬೆದರಿಸಿ 1 ಕೋಟಿ ರೂಪಾಯಿಗೆ ಬೇಡಿಕೆಯಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ,  ರಾಹುಲ್ ಭಟ್ ಎಂಬಾತನನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ರಾಹುಲ್ ನಗರದ ಪ್ರಮುಖ ಜ್ಯೋತಿಷಿಯ ಮಗ ಎಂದು ತಿಳಿದು ಬಂದಿದ್ದು, “ನಿಮ್ಮ ಮಗನ ಅಶ್ಲೀಲ ವಿಡಿಯೋ ನಮ್ಮ ಬಳಿಯಲ್ಲಿದೆ. 1 ಕೋಟಿ ರೂಪಾಯಿ ಕೊಡದಿದ್ದರೆ, ಸಾಮಾಜಿಕ ಜಾಲತಾಣಗಳಲ್ಲಿ ಅದನ್ನು ಬಿಡುಗಡೆ ಮಾಡುತ್ತೇವೆ ಎಂಬ ಸಂದೇಶವನ್ನು ಆರೋಪಿಯು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಗೆ ಕಳುಹಿಸಿದ್ದ ಎನ್ನಲಾಗಿದೆ.

ಇನ್ನೂ ಇಂಡಿ ವಿಧಾನಸಭಾ ಕ್ಷೇತ್ರದ ಶಾಸಕ ಯಶವಂತರಾಯಗೌಡ ಪಾಟೀಲ ಎಂಬವರ ಪುತ್ರಿಯ ನಂಬರ್ ನ್ನು ದುರ್ಬಳಕೆ ಮಾಡಿಕೊಂಡು ಈ ಕೃತ್ಯ ನಡೆಸಲಾಗಿದೆ ಎಂದು ಸದ್ಯ ವರದಿಯಾಗಿದೆ.

ಘಟನೆ ಸಂಬಂಧ ಪ್ರತಿಕ್ರಿಯಿಸಿರುವ ಎಸ್.ಟಿ.ಸೋಮಶೇಖರ್, ನನ್ನ ಪುತ್ರನ ಚಿತ್ರ ಪಡೆದು ನಕಲಿ ವಿಡಿಯೋ ಸೃಷ್ಟಿಸಲಾಗಿದೆ. ಈ ವಿಡಿಯೋ ಸಂಬಂಧ ವಿಡಿಯೋ ಸಮೇತ ದೂರು ನೀಡಿದ್ದೇವೆ. ವಿಧಿ ವಿಜ್ಞಾನ ಪ್ರಯೋಗಾಲಯದ ವರದಿ ಬಂದ ಬಳಿಕ ಸತ್ಯ ಗೊತ್ತಾಗಲಿದೆ ಎಂದು ಅವರು ತಿಳಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಟಿವಿ ನೋಡಬೇಡ ಎಂದಿದ್ದಕ್ಕೆ ಆತ್ಮಹತ್ಯೆಗೆ ಶರಣಾದ ಯುವಕ

ನಾನು ಕುಡಿಯುತ್ತೇನೋ, ಬಿಡುತ್ತೇನೋ ಅದೆಲ್ಲಾ ಬೇಡ: ಡಿ.ಕೆ.ಶಿವಕುಮಾರ್

ಆಟೋ ಚಾಲಕನ ತಲೆಗೆ ಕಲ್ಲು ಎತ್ತಿ ಹಾಕಿ ಬರ್ಬರ ಹತ್ಯೆ

ಮೇಕೆದಾಟು ಪಾದಯಾತ್ರೆ ಅರ್ಧದಲ್ಲೇ ಬಿಟ್ಟು ತೆರಳಿದ ಸಿದ್ದರಾಮಯ್ಯ: ಕಾರಣ ಏನು ಗೊತ್ತಾ?

ಸುವರ್ಣ ನ್ಯೂಸ್, ಕನ್ನಡ ಪ್ರಭಕ್ಕೆ ಲೀಗಲ್ ನೋಟಿಸ್ ಕಳಿಸಿದ ಬಿಟಿವಿ!

ಇತ್ತೀಚಿನ ಸುದ್ದಿ

Exit mobile version