ಆಸ್ಪತ್ರೆಗೆ ಸೇರಿಸಿಕೊಳ್ಳದ ಸಿಬ್ಬಂದಿ: ತಳ್ಳುಗಾಡಿಯಲ್ಲೇ ಮಗುವಿಗೆ ಜನ್ಮ ನೀಡಿದ ತಾಯಿ

ಚಂಡೀಗಡ: ವೈದ್ಯರನ್ನು ಪ್ರಾಣ ಉಳಿಸುವ ದೇವರು ಅಂತ ಮುಗ್ಧ ಜನರು ನಂಬುತ್ತಾರೆ, ಆದ್ರೆ ಇಲ್ಲೊಂದು ಆಸ್ಪತ್ರೆಯಲ್ಲಿ ತುಂಬು ಗರ್ಭಿಣಿ ಹೆರಿಗೆ ನೋವಿನಿಂದ ನರಳಾಡುತ್ತಿದ್ದರೂ ಕಣ್ಣಿದ್ದೂ ಕುರುಡರಂತೆ ಆಸ್ಪತ್ರೆ ಸಿಬ್ಬಂದಿ ವರ್ತಿಸಿದ ಅಮಾನವೀಯ ಘಟನೆ ಹರ್ಯಾಣದ ಅಂಬಾಲಾದಲ್ಲಿ ನಡೆದಿದೆ.
ಪಂಜಾಬ್ ನ ಮೊಹಾಲಿ ಜಿಲ್ಲೆಯ ದಪ್ಪರ್ ನ ನಿವಾಸಿ ಮಹಿಳೆ ಹೆರಿಗೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸರ್ಕಾರಿ ಆಸ್ಪತ್ರೆಗೆ ಆಗಮಿಸಿದ್ದರು. ಆದರೆ ಅವರನ್ನು ಆಸ್ಪತ್ರೆಗೆ ದಾಖಲಿಸಿಕೊಳ್ಳದೇ ಆಸ್ಪತ್ರೆ ಸಿಬ್ಬಂದಿ ಅಮಾನವೀಯವಾಗಿ ವರ್ತಿಸಿದ್ದಾರೆ.
ಮಹಿಳೆಯ ಕುಟುಂಬಸ್ಥರು ಆಸ್ಪತ್ರೆಗೆ ದಾಖಲಿಸಿಕೊಳ್ಳಿ ಎಂದು ಅಂಗಲಾಚಿದರೂ, ಸಿಬ್ಬಂದಿ ಕರುಣೆ ತೋರಲಿಲ್ಲ, ಹೆರಿಗೆ ನೋವಿನಿಂದ ನರಳುತ್ತಿದ್ದ ಮಹಿಳೆ ಕೊನೆಗೆ ಆಸ್ಪತ್ರೆ ಆವರಣದಲ್ಲಿದ್ದ ತರಕಾರಿ ತಳ್ಳುಗಾಡಿಯಲ್ಲೇ ಮಲಗಿ ಮಗುವಿಗೆ ಜನ್ಮ ನೀಡಿದ್ದಾರೆ.
ಮಹಿಳೆ ಮಗುವಿಗೆ ಜನ್ಮ ನೀಡಿದ ಬಳಿಕ ಆಸ್ಪತ್ರೆ ಸಿಬ್ಬಂದಿ ಮಹಿಳೆಯನ್ನು ಆಸ್ಪತ್ರೆಯೊಳಗೆ ಕರೆದೊಯ್ದಿದ್ದಾರೆ. ಮಹಿಳೆಯ ಪ್ರಾಣಕ್ಕೆ ಅಪಾಯವಾದ್ರೆ ಕಾನೂನಾತ್ಮಕ ಸಮಸ್ಯೆಗಳು ಬರಬಹುದು ಎಂದು ಹೆದರಿ ಸಿಬ್ಬಂದಿ ಮಹಿಳೆಯನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ ಎಂದು ಮಹಿಳೆಯ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಆಸ್ಪತ್ರೆಯ ಹೊರಗೆ ಮಹಿಳೆಯ ಕುಟುಂಬಸ್ಥರು ಅಂಗಲಾಚಿ ಕರೆದರೂ ಯಾವೊಬ್ಬ ವೈದ್ಯರೂ ಸಹಾಯಕ್ಕೆ ಬಂದಿರಲಿಲ್ಲ, ಈ ಬಗ್ಗೆ ನೋವು ಹಂಚಿಕೊಂಡಿರುವ ಮಹಿಳೆ ಪತಿ, ಆ ದೇವರೇ ನನ್ನ ಪತ್ನಿ, ಮಗುವನ್ನು ಕಾಪಾಡಿದ್ದಾನೆ. ವೈದ್ಯರನ್ನು ದೇವರು ಮತ್ತು ಆಸ್ಪತ್ರೆಯವರನ್ನು ದೇವರು ಎಂದು ಭಾವಿಸಿದ್ದೆ. ಈ ಘಟನೆ ವೈದ್ಯರ ಮೇಲಿನ ನಂಬಿಕೆಯನ್ನೇ ಕಳೆದುಕೊಳ್ಳುವಂತೆ ಮಾಡಿದೆ ಎಂದು ಕಣ್ಣೀರು ಹಾಕಿದ್ದಾರೆ.
ಈ ಬಗ್ಗೆ ಬಗ್ಗೆ ರಾಜ್ಯ ಆರೋಗ್ಯ ಸಚಿವ ಅನಿಲ್ ವಿಜ್ ಅವರಿಗೂ ವರದಿ ಮಾಡಲಾಗಿದ್ದು, ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆಯಾಗಲಿದೆ ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ:
Click: ಕಾರಿನಲ್ಲಿ ತೆರಳುತ್ತಿದ್ದ ಯುವತಿಯನ್ನು ತಡೆದ ಪುಂಡರ ತಂಡ: ಬೈಕ್ ಮೇಲೆ ಕಾರು ಚಲಾಯಿಸಿದ ಯುವತಿ
Click: ಎಂಥಾ ಮಕ್ಕಳಿಗೆ ಜನ್ಮ ಕೊಟ್ಟೆ ತಾಯಿ: 7 ಮಕ್ಕಳಿದ್ದರೂ ತಾಯಿ ಸತ್ತಾಗ ಒಬ್ಬರೂ ಬರಲಿಲ್ಲ!
Click: ಮಗನನ್ನು ಹತ್ಯೆ ಮಾಡಿ ಬ್ಯಾಗಿನಲ್ಲಿಟ್ಟುಕೊಂಡು ಸಾಗಿಸುತ್ತಿದ್ದ ಮಹಿಳೆ ಅರೆಸ್ಟ್
Click: ಅಯ್ಯಪ್ಪ ಮಾಲಾಧಾರಿಗಳ ಕಾರು ಭೀಕರ ಅಪಘಾತ: ಇಬ್ಬರು ಸಾವು