RCB ಸಂಭ್ರಮಾಚರಣೆ ವೇಳೆ ಕಾಲ್ತುಳಿತ: ಇಬ್ಬರು ಸಾವು, 15ಕ್ಕೂ ಅಧಿಕ ಜನ ಅಸ್ವಸ್ಥ - Mahanayaka

RCB ಸಂಭ್ರಮಾಚರಣೆ ವೇಳೆ ಕಾಲ್ತುಳಿತ: ಇಬ್ಬರು ಸಾವು, 15ಕ್ಕೂ ಅಧಿಕ ಜನ ಅಸ್ವಸ್ಥ

rcb
04/06/2025


Provided by

ಬೆಂಗಳೂರು: IPL 18ನೇ ಆವೃತ್ತಿಯಲ್ಲಿ ಫೈನಲ್ ಗೆದ್ದು ಚಾಂಪಿಯನ್ ಆಗಿರುವ  ರಾಯಲ್ ಚಾಲೆಂಜರ್ಸ್ ಬೆಂಗಳೂರು(RCB) ತಂಡದ ಸಂಭ್ರಮಾಚರಣೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದು, ಸಂಭ್ರಮಾಚರಣೆ ಸಂದರ್ಭದಲ್ಲಿ ದುಃಖಕರ ಸನ್ನಿವೇಶ ಸೃಷ್ಟಿಯಾಗಿದೆ.

ಮೆಚ್ಚಿನ ಕ್ರಿಕೆಟಿಗರನ್ನು ನೋಡುವ ಧಾವಂತದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ಸಂಭವಿಸಿದ್ದು, ವರದಿಗಳ ಪ್ರಕಾರ ಇಬ್ಬರು ಸಾವಿಗೀಡಾಗಿದ್ದಾರೆ ಎಂದು ತಿಳಿದು ಬಂದಿದೆ.

ಕಾಲ್ತುಳಿತದಲ್ಲಿ 15ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ. ಅಸ್ವಸ್ಥಗೊಂಡವರನ್ನು ಶಿವಾಜಿನಗರದಲ್ಲಿರುವ ಬೌರಿಂಗ್ ಮತ್ತು ​ಲೇಡಿ ಕರ್ಜನ್ ಆಸ್ಪತ್ರೆ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಲ್ಲದೆ, ಬ್ಯಾರಿಕೇಡ್​ ಬಿದ್ದು ಮೂವರ ಕಾಲು ಮುರಿದಿದೆ.  ಆರಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯವಾಗಿದೆ. ಜನಸ್ತೋಮವನ್ನು ನಿಯಂತ್ರಿಸಲು ಪೋಲಿಸರು ಹರಸಾಹಸ ಪಡುತ್ತಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ