ಕಾಲ್ತುಳಿತ ಪ್ರಕರಣ: ಮೃತರ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ಘೋಷಿಸಿದ RCB

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಐಪಿಎಲ್ ಚಾಂಪಿಯನ್ ಆರ್ ಸಿಬಿ ತಲಾ 25 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ.
ಫ್ರಾಂಚೈಸಿ ತನ್ನ ಹೊಸ ಉಪಕ್ರಮ `ಆರ್ ಸಿಬಿ ಕೇರ್ಸ್’ ಅಡಿಯಲ್ಲಿ ಆರ್ಥಿಕ ಸಹಾಯವನ್ನು ವಿಸ್ತರಿಸಲಾಗುತ್ತಿದೆ ಎಂದು ತಿಳಿಸಿದೆ.
ಆರ್‌ಸಿಬಿ ಎಕ್ಸ್ ಖಾತೆಯಲ್ಲಿ ಈ ಬಗ್ಗೆ ಪೋಸ್ಟ್ ಮಾಡಿದೆ. ಜೂ.4 2025ರ ಈ ದಿನ ನಮ್ಮ ಹೃದಯದಲ್ಲಿ ಶಾಶ್ವತವಾಗಿ ಉಳಿಯಲಿದೆ. ನಾವು ಕಳೆದುಕೊಂಡಿದ್ದು 11 ಅಭಿಮಾನಿಗಳನ್ನಷ್ಟೇ ಅಲ್ಲ, ಅವರು ನಮ್ಮ ಕುಟುಂಬದ ಸದಸ್ಯರಾಗಿದ್ದರು. ನಮ್ಮ ಹೃದಯದ ಭಾಗವಾಗಿದ್ದರು. ಅವರ ಉತ್ಸಾಹವೇ ನಮ್ಮ ಶಕ್ತಿ. ಅದು ತಂಡಕ್ಕೆ ಜೀವ ತುಂಬುವ ಬೆಳಕಾಗಿತ್ತು ಎಂದು ಬರೆದುಕೊಂಡಿದ್ದಾರೆ.
ನಮ್ಮ ನೆನಪುಗಳಲ್ಲಿ ಅವರು ಸದಾ ಜೀವಂತವಾಗಿರುತ್ತಾರೆ. ಜಾಗವನ್ನು ಯಾವ ಸಹಾಯವೂ ತುಂಬಲಾರದು. ಗೌರವದ ಸಂಕೇತವಾಗಿ, ಆರ್ ಸಿಬಿ ಪ್ರತಿ ಕುಟುಂಬಕ್ಕೆ ತಲಾ 25 ಲಕ್ಷ ರೂ. ನೆರವು ನೀಡುತ್ತಿದೆ. ಇದು ಕೇವಲ ಆರ್ಥಿಕ ಸಹಾಯವಲ್ಲ, ಕರುಣೆ, ಒಗ್ಗಟ್ಟು ಮತ್ತು ನಿರಂತರ ಕಾಳಜಿಯ ಭರವಸೆಯಾಗಿದೆ ಎಂದಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD