ಫೆಬ್ರವರಿ 12ರಿಂದ ರಾಜ್ಯ ಬಜೆಟ್‌ ಅಧಿವೇಶನ ಆರಂಭ: 16ರಂದು ಬಜೆಟ್‌ ಮಂಡನೆ:‌ ವಿಧಾನ ಸಭಾ ಸ್ಪೀಕರ್‌ ಯು.ಟಿ.ಖಾದರ್ - Mahanayaka
8:01 AM Saturday 20 - December 2025

ಫೆಬ್ರವರಿ 12ರಿಂದ ರಾಜ್ಯ ಬಜೆಟ್‌ ಅಧಿವೇಶನ ಆರಂಭ: 16ರಂದು ಬಜೆಟ್‌ ಮಂಡನೆ:‌ ವಿಧಾನ ಸಭಾ ಸ್ಪೀಕರ್‌ ಯು.ಟಿ.ಖಾದರ್

u-t-khadar
06/02/2024

ಬೆಂಗಳೂರು: ಫೆಬ್ರವರಿ 12 ರಿಂದ ರಾಜ್ಯ ಬಜೆಟ್ ಅಧಿವೇಶನ ಆರಂಭವಾಗಲಿದೆ, ಫೆಬ್ರವರಿ 16 ರಂದು ಬಜೆಟ್ ಮಂಡನೆಯಾಗಲಿದೆ ಎಂದು ವಿಧಾನ ಸಭಾ ಸ್ಪೀಕರ್ ಯು.ಟಿ.ಖಾದರ್ ತಿಳಿಸಿದ್ದಾರೆ.

ಫೆಬ್ರವರಿ 12 ರಂದು ಬಜೆಟ್ ಅಧಿವೇಶನ ಪ್ರಾರಂಭವಾಗಲಿದ್ದು, ಅಂದು ರಾಜ್ಯಪಾಲರು ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಕಲಾಪಕ್ಕೆ ಯಾವುದೇ ಶಾಸಕರು ಗೈರಾಗಬಾರದು ಎಂದು ಸಭಾಧ್ಯಕ್ಷರು ತಿಳಿಸಿದರು.

12ರಂದು ರಾಜ್ಯಪಾಲರು ಉಭಯ ಸದನಗಳ ಸದಸ್ಯರನ್ನು ಉದ್ದೇಶಿಸಿ ಭಾಷಣ ಮಾಡಲಿದ್ದು, ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆ ನಡೆದು ತದನಂತರ ನಿರ್ಣಯ ಅಂಗೀಕಾರವಾಗಲಿದೆ. ರಾಜ್ಯಪಾಲರ ಭಾಷಣದ ನಂತರ 16ನೇ ವಿಧಾನಸಭೆಯ 02ನೇ ಅಧಿವೇಶನ ಮುಕ್ತಾಯವಾದ ನಂತರ ಇಲ್ಲಿಯವರೆಗೆ ನಿಧನ ಹೊಂದಿದ ಗಣ್ಯ ವ್ಯಕ್ತಿಗಳ ಕುರಿತು ಸಂತಾಪ ಸೂಚನಾ ನಿರ್ಣಯಗಳನ್ನು ಮಂಡಿಸಲಾಗುವುದು ಎಂದು ಅವರು ತಿಳಿಸಿದರು.

10 ದಿನಗಳ ಕಾಲ ನಡೆಯುವ ಈ ಅಧಿವೇಶನದಲ್ಲಿ 8 ದಿನಗಳ ಕಾಲ ಪ್ರಶ್ನೋತ್ತರ ಕಲಾಪಗಳನ್ನ ನಿಗದಿಪಡಿಸಲಾಗಿದೆ. ಇದರ ಜೊತೆಗೆ ಗಮನಸೆಳೆಯುವ ಸೂಚನೆಗಳು, ಶೂನ್ಯವೇಳೆ, ನಿಲುವಳಿ ಸೂಚನೆ, ನಿಯಮ 69ರ ಸೂಚನೆಗಳು, ಖಾಸಗಿ ಸದಸ್ಯರುಗಳ ಕಾರ್ಯಕಲಾಪಗಳನ್ನು ನಡೆಸಲಾಗುವುದು ಎಂದು ತಿಳಿಸಿದರು.

ಇತ್ತೀಚಿನ ಸುದ್ದಿ