ರಂಜಾನ್ ಪ್ರಯುಕ್ತ ಮುಸ್ಲಿಂ ವಿದ್ಯಾರ್ಥಿಗಳಿಗೆ ಶಾಲಾ ಸಮಯ ಬದಲಿಸಿದ ರಾಜ್ಯ ಸರ್ಕಾರ

ಬೆಂಗಳೂರು: ರಂಜಾನ್ ತಿಂಗಳಿನಲ್ಲಿ ಮುಸ್ಲಿಂ ಶಾಲಾ ಮಕ್ಕಳ ವೇಳಾಪಟ್ಟಿ ಸಡಿಲಿಕೆ ಮಾಡಿ ಶುಕ್ರವಾರ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
ರಂಜಾನ್ ತಿಂಗಳಲ್ಲಿ ಮುಸ್ಲಿಂ ವಿದ್ಯಾರ್ಧಿಗಳಿಗೆ ಮತ್ತು ಸಿಬ್ಬಂದಿಗಳಿಗೆ ಸರ್ಕಾರಿ ಅನುದಾನ ಮತ್ತು ಅನುದಾನ ರಹಿತ ಶಾಲೆಯಲ್ಲಿ ಸಂಜೆ ಅರ್ಧಗಂಟೆ ಮುಂಚಿತವಾಗಿ ತೆರಳಲು ಅನುಮತಿ ನೀಡಲಾಗಿದೆ. ಉರ್ದು ಶಾಲೆಗಳಲ್ಲಿ ಕೂಡ ಸಮಯದಲ್ಲಿ ತುಸು ಬದಲಾವಣೆ ಮಾಡಲಾಗಿದೆ.
ರಂಜಾನ್ ತಿಂಗಳಲ್ಲಿ ಉರ್ದು ಶಾಲೆಗಳಿಗೆ ಬೆಳಗ್ಗೆ 8 ಗಂಟೆಯಿಂದ ಮಧ್ಯಾಹ್ನ 12:45ವರೆಗೆ ಸಮಯ ನಿಗದಿ ಮಾಡಲಾದ ಜೊತೆಗೆ ರಂಜಾನ್ ತಿಂಗಳಲ್ಲಿ ಕಡಿತಗೊಳ್ಳುವ ಶಾಲಾ ಸಮಯವನ್ನು ಮುಂದಿನ ರಜಾ ದಿನದಲ್ಲಿ ತರಗತಿ ನಡೆಸಿ ಸರಿದೂಗಿಸಿಕೊಳ್ಳುವಂತೆ ಸೂಚನೆ ನೀಡಲಾಗಿದೆ.
ಉರ್ದು ಶಾಲೆಯ ಸಮಯ ಬದಲಾವಣೆಗೆ ಕೆಲ ಮುಸ್ಲಿಂ ಶಾಸಕರು ಮನವಿ ಮಾಡಿದ್ದರು. ಹೀಗಾಗಿ ಶಾಲಾ ಶಿಕ್ಷಣ ಇಲಾಖೆಯಿಂದ ಉರ್ದು ಶಾಲೆಗಳ ಸಮಯ ಬದಲಾಯಿಸಿ ಆದೇಶವನ್ನು ಶುಕ್ರವಾರ ಹೊರಡಿಸಲಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth