ಔರಂಗ್‌ ಜೇಬ್‌, ಟಿಪ್ಪು ಸುಲ್ತಾನ್‌ ಕುರಿತ ಪೋಸ್ಟ್‌: ಬಂದ್‌, ಪ್ರತಿಭಟನೆ ಉದ್ವಿಗ್ನ..! - Mahanayaka
10:29 AM Saturday 31 - January 2026

ಔರಂಗ್‌ ಜೇಬ್‌, ಟಿಪ್ಪು ಸುಲ್ತಾನ್‌ ಕುರಿತ ಪೋಸ್ಟ್‌: ಬಂದ್‌, ಪ್ರತಿಭಟನೆ ಉದ್ವಿಗ್ನ..!

07/06/2023

ಟಿಪ್ಪು ಸುಲ್ತಾನ್ ಅವರ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ  ಪೋಸ್ಟ್ ವಿಚಾರದಲ್ಲಿ ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಉದ್ವಿಗ್ನತೆ ಉಂಟಾಗಿದೆ. ಟಿಪ್ಪು ಸುಲ್ತಾನ್ ಚಿತ್ರವನ್ನು ‘ಆಡಿಯೋ’ ಸಂದೇಶದೊಂದಿಗೆ ತಮ್ಮ ಸಾಮಾಜಿಕ ಮಾಧ್ಯಮ ಪ್ರೊಫೈಲ್‌ಗಳಲ್ಲಿ ಬಳಸಿರುವ ಸ್ಥಳೀಯರ ವಿರುದ್ಧ ಪ್ರತಿಭಟಿಸಿ ಕೆಲವು ಸಂಘಟನೆಗಳು ‘ಕೊಲ್ಹಾಪುರ ಬಂದ್’ಗೆ ಕರೆ ನೀಡಿದ್ದವು.

ಸ್ಥಳೀಯರು ಮೊಘಲ್ ಚಕ್ರವರ್ತಿ ಔರಂಗಜೇಬ್ ಅನ್ನು ಬೆಂಬಲಿಸುವ ಪೋಸ್ಟ್‌ಗಳನ್ನು ಹಾಕಿದ್ದಾರೆ. ಈ ಬಗ್ಗೆ ಕೆಲವು ಬಲಪಂಥೀಯ ಕಾರ್ಯಕರ್ತರು ಈ ಬಗ್ಗೆ ಪ್ರತಿಭಟನೆ ನಡೆಸಲು ಶಿವಾಜಿ ಚೌಕ್‌ನಲ್ಲಿ ಜಮಾಯಿಸಿದ್ದರು. ಪೊಲೀಸರ ಪ್ರಕಾರ, ಪ್ರತಿಭಟನೆ ಮುಗಿದ ನಂತರ ಗುಂಪು ಚದುರಿತು. ಆದರೆ, ಅವರ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾರೆ ಎಂದು ಕೊಲ್ಹಾಪುರ ಪೊಲೀಸ್ ವರಿಷ್ಠಾಧಿಕಾರಿ ಮಹೇಂದ್ರ ಪಂಡಿತ್ ಪಿಟಿಐ‌ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

ಪಿಟಿಐ ಹಂಚಿಕೊಂಡ ವೀಡಿಯೊದಲ್ಲಿ, ಗುಂಪನ್ನು ಚದುರಿಸಲು ಪೊಲೀಸರು ಲಾಠಿ ಪ್ರಹಾರ ಮಾಡುತ್ತಿರುವುದು ಕಂಡುಬಂದಿದೆ. ಸಾಮಾಜಿಕ ಜಾಲತಾಣದಲ್ಲಿ ಟಿಪ್ಪು ಸುಲ್ತಾನ್ ಚಿತ್ರವನ್ನು ಬಳಸಿದವರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ಮಹಾರಾಷ್ಟ್ರ ಉಸ್ತುವಾರಿ ಸಚಿವ ದೀಪಕ್ ಕೇಸರ್ಕರ್ ತಿಳಿಸಿದ್ದಾರೆ. ಸದ್ಯ ಹೆಚ್ಚುವರಿ ಪಡೆ ನಿಯೋಜನೆ ಮಾಡಲಾಗಿದೆ. ಈವರೆಗೆ 21 ಮಂದಿಯನ್ನು ಬಂಧಿಸಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ