ರೌಡಿಶೀಟರ್ ಸುಹಾಸ್ ಶೆಟ್ಟಿಯ ಹತ್ಯೆ: 6 ಕೆಎಸ್ ಆರ್ ಟಿಸಿ ಬಸ್ ಗಳ ಮೇಲೆ ಕಲ್ಲು ತೂರಾಟ!

ksrtc
02/05/2025

ಮಂಗಳೂರು: ರೌಡಿಶೀಟರ್ ಸುಹಾಸ್ ಶೆಟ್ಟಿಯ ಹತ್ಯೆ ಹಿನ್ನೆಲೆ ಹಿಂದುತ್ವ ಸಂಘಟನೆಗಳು ಬಂದ್ ಗೆ ಕರೆ ನೀಡಿದ್ದು, ಈ ಹಿನ್ನೆಲೆಯಲ್ಲಿ ಮಂಗಳೂರಿನ ಅಲ್ಲಲ್ಲಿ ಬಸ್ ಗಳ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ.

ಬೆಳಿಗ್ಗೆ 7:30ರವರೆಗೆ ಬಸ್ ಗಳು ಸಂಚಾರ ನಡೆಸಿದ್ದವು. ಆದರೆ 6 ಬಸ್ ಗಳಿಗೆ ಕಲ್ಲು ತೂರಾಟ ನಡೆಸಿರುವ ಹಿನ್ನೆಲೆ ತಾತ್ಕಾಲಿಕವಾಗಿ ಬಸ್ ಸಂಚಾರ ರದ್ದುಗೊಳಿಸಲಾಗಿದೆ.
ಮೈಸೂರು ಹಾಗೂ ಪುತ್ತೂರಿಗೆ ಸಂಚರಿಸುತ್ತಿದ್ದ ಬಸ್ ಗಳ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಸದ್ಯ ತಾತ್ಕಾಲಿಕವಾಗಿ ಬಸ್ ಸಂಚಾರ ರದ್ದುಗೊಳಿಸಲಾಗಿದೆ. ಪರಿಸ್ಥಿತಿ ಗಮನಿಸಿ ಬಸ್ ಸಂಚಾರ ಪುನರಾರಂಭಿಸಲಾಗುವುದು ಎಂದು ಕೆಎಸ್ ಆರ್ ಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.

ಬಸ್ ಸಂಚಾರ ಸ್ಥಗಿತಗೊಂಡ ಹಿನ್ನೆಲೆ ಪ್ರಯಾಣಿಕರು ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದಲ್ಲಿ ಪರದಾಡುತ್ತಿರುವ ದೃಶ್ಯ ಕಂಡು ಬಂತು. ಕೆಲವರು ದುಬಾರಿ ಹಣಕೊಟ್ಟು ಟಾಕ್ಸಿ, ಆಟೋಗಳಲ್ಲಿ ಸಂಚರಿಸುವಂತಾಗಿದೆ. ರೈಲು ನಿಲ್ದಾಣಗಳಲ್ಲಿ ವಿವಿಧೆಡೆಗಳಿಗೆ ಸಂಚರಿಸುವ ಪ್ರಯಾಣಿಕರು ಪರದಾಡುತ್ತಿರುವ ದೃಶ್ಯ ಕಂಡು ಬಂತು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ

Exit mobile version