ಬೆಂಗಳೂರಿನಲ್ಲಿ ವಂದೇ ಭಾರತ್ ರೈಲಿನ ಮೇಲೆ ಕಲ್ಲು ತೂರಾಟ - Mahanayaka
11:04 PM Thursday 18 - December 2025

ಬೆಂಗಳೂರಿನಲ್ಲಿ ವಂದೇ ಭಾರತ್ ರೈಲಿನ ಮೇಲೆ ಕಲ್ಲು ತೂರಾಟ

banglore
26/02/2023

ಬೆಂಗಳೂರು: ಬೆಂಗಳೂರಿನಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್‌ ಹೈಸ್ಪೀಡ್ ರೈಲಿಗೆ ಕೆಲವರು ಕಲ್ಲು ತೂರಾಟ ನಡೆಸಿದ್ದಾರೆ.ಕಲ್ಲು ತೂರಾಟ ನಡೆಸಿದ ಪರಿಣಾಮ ವಂದೇ ಭಾರತ್ ಎಕ್ಸ್‌ಪ್ರೆಸ್‌’ನ ಗಾಜುಗಳಿಗೆ ಹಾನಿಯಾಗಿದೆ ಎಂದು ನೈಋತ್ಯ ರೈಲ್ವೆ ಇಂದು ಪ್ರಕಟಣೆಯಲ್ಲಿ ತಿಳಿಸಿದೆ.

ರೈಲು ಮೈಸೂರಿನಿಂದ ತಮಿಳುನಾಡಿನ ರಾಜಧಾನಿ ಚೆನ್ನೈಗೆ ತೆರಳುತ್ತಿದ್ದ ವೇಳೆ ಕಲ್ಲು ಎಸೆಯಲಾಗಿದೆ.ಘಟನೆಯಿಂದ ಯಾರಿಗೂ ಗಾಯಗಳಾಗಿಲ್ಲ. ಈ ಬಗ್ಗೆ ಪ್ರಕರಣ ದಾಖಲಿಸಲಾಗಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

‘ರೈಲು ಸಂಖ್ಯೆ 20608 ಮೈಸೂರು-ಚೆನ್ನೈ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಕೆಲವು ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದರಿಂದ ಕೋಚ್‌ನ ಎರಡು ಕಿಟಕಿಗಳು ಹಾನಿಗೊಳಗಾಗಿವೆ.

ಕೃಷ್ಣರಾಜಪುರಂ ಮತ್ತು ಬೆಂಗಳೂರು ಕಂಟೋನ್ಮೆಂಟ್ ರೈಲು ನಿಲ್ದಾಣಗಳ ನಡುವೆ ಈ ಘಟನೆ ಸಂಭವಿಸಿದೆ’ ಎಂದು ನೈಋತ್ಯ ರೈಲ್ವೆ ತಿಳಿಸಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

 

ಇತ್ತೀಚಿನ ಸುದ್ದಿ