ಭಾರತ್ ಜೋಡೋ ನ್ಯಾಯ್ ಯಾತ್ರೆಯ ವೇಳೆ ರಾಹುಲ್ ಗಾಂಧಿ ಕಾರಿಗೆ ಕಲ್ಲು ತೂರಾಟ!
31/01/2024
ಪಶ್ಚಿಮ ಬಂಗಾಳ: ಭಾರತ್ ಜೋಡೋ ನ್ಯಾಯ್ ಯಾತ್ರೆಯ ವೇಳೆ ಕಿಡಿಗೇಡಿಗಳು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಕಾರಿಗೆ ಕಲ್ಲು ಎಸೆದಿರುವ ಘಟನೆ ಪಶ್ಚಿಮ ಬಂಗಾಳದ ಮಾಲ್ಡಾದಲ್ಲಿ ನಡೆದಿದೆ.
ಬಿಹಾರದಿಂದ ಮಾಲ್ಡಾಗೆ ತೆರಳುತ್ತಿದ್ದ ವೇಳೆ ಗುಂಪೊಂದು ಪೂರ್ವನಿಯೋಜಿತ ಕೃತ್ಯ ಎಸಗಿದ್ದು, ರಾಹುಲ್ ಗಾಂಧಿ ಅವರ ಕಾರಿಗೆ ಕಲ್ಲು ಎಸೆದಿದ್ದಾರೆ ಎನ್ನಲಾಗಿದೆ.
ಕಲ್ಲು ಎಸೆತದ ಪರಿಣಾಮ ರಾಹುಲ್ ಗಾಂಧಿ ಅವರ ಕಾರಿನ ಗಾಜು ಪುಡಿಪುಡಿಯಾಗಿದೆ. ಘಟನೆಯ ಬಳಿಕ ರಾಹುಲ್ ಗಾಂಧಿ ಕಾರಿನಿಂದ ಇಳಿದಿದ್ದರು.
ಇದೇ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಅಧೀರ್ ರಂಜನ್ ಚೌಧರಿ ಘಟನೆಯ ಬಗ್ಗೆ ವಿವರಿಸಿದ್ದು, ನಾನು ಕಾರಿನೊಳಗೆ ಇದ್ದೆ ಯಾರೋ ಹಿಂದಿನಿಂದ ಇಟ್ಟಿಗೆ ಎಸೆದಿದ್ದಾರೆ ಎಂದು ತಿಳಿಸಿದರು.
ಭಾರತ್ ಜೋಡೋ ಯಾತ್ರೆ ಪಶ್ಚಿಮ ಬಂಗಾಳಕ್ಕೆ ಪ್ರವೇಶಿಸಿದಾಗಿನಿಂದ ಈ ರೀತಿಯ ಅಡೆತಡೆಗಳನ್ನು ಎದುರಿಸುತ್ತಿರುವುದಾಗಿ ಅವರು ಇದೇ ವೇಳೆ ಆತಂಕ ವ್ಯಕ್ತಪಡಿಸಿದರು.

























