ಭಾರೀ ಮಳೆಗೆ ಹಾರಿ ಹೋದ ಮನೆಯ ಮೇಲ್ಛಾವಣಿ: ಆತಂಕ ಸೃಷ್ಟಿಸಿದ ಬಿರುಗಾಳಿ ಮಳೆ - Mahanayaka

ಭಾರೀ ಮಳೆಗೆ ಹಾರಿ ಹೋದ ಮನೆಯ ಮೇಲ್ಛಾವಣಿ: ಆತಂಕ ಸೃಷ್ಟಿಸಿದ ಬಿರುಗಾಳಿ ಮಳೆ

chamarajanagar
25/05/2023

ಚಾಮರಾಜನಗರ: ಚಾಮರಾಜನಗರ ಜಿಲ್ಲೆ ವಿವಿಧೆಡೆ ನಿನ್ನೆ ಸಂಜೆ ಸುರಿದ ಭಾರೀ ಮಳೆಗೆ  ಮನೆಯ ಮೇಲ್ಛಾವಣಿ ಹಾರಿ ಹೋಗಿರುವ ಘಟನೆ ನಡೆದಿದೆ.

ಮಳೆಯಿಂದಾಗಿ ವಿವಿಧೆಡೆಗಳಲ್ಲಿ ಹಾನಿಯಾಗಿದೆ. ಚಾಮರಾಜನಗರ ಜಿಲ್ಲೆ ಮೂಕನಪಾಳ್ಯ ಗ್ರಾಮದಲ್ಲಿ ಮರಗಳು ನೆಲಕ್ಕುರುಳಿವೆ. ಮೂಕನಪಾಳ್ಯ ಗ್ರಾಮದ ನಾಗೇಶನಾಯಕ ಎಂಬವರಿಗೆ ಸೇರಿದ ಮನೆಗೆ ಮಳೆ ಬಿರುಗಾಳಿಯಿಂದಾಗಿ ಹಾನಿಯಾಗಿದೆ.

ಸತತ ಎರಡು ಗಂಟೆಗೂ ಹೆಚ್ಚು ಕಾಲ ನಿರಂತರವಾಗಿ ಭಾರೀ ಗಾಳಿ‌ ಸಹಿತ ಮಳೆಯಾಗಿದೆ.  ಬಿರುಗಾಳಿ ಮಳೆ ಗ್ರಾಮಸ್ಥರಲ್ಲಿ ಕೆಲಕಾಲ ಆತಂಕ ಸೃಷ್ಟಿಸಿತು. ಗ್ರಾಮದ ಅನೇಕ ಮರ ಹಾಗೂ ಲೈಟು‌ ಕಂಬಗಳು ಉರುಳಿವೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ