ವ್ಯಕ್ತಿಯನ್ನು ರಸ್ತೆಯಲ್ಲಿ ಉರುಳಿಸಿ ಕಚ್ಚಿದ ಬೀದಿನಾಯಿಗಳು: ಭೀಕರ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ

ಬಾಗಲಕೋಟೆ: ವ್ಯಕ್ತಿಯೋರ್ವರ ಮೇಲೆ ಬೀದಿನಾಯಿಗಳು ಭೀಕರವಾಗಿ ದಾಳಿ ನಡೆಸಿರುವ ಘಟನೆ ಬಾಗಲಕೋಟೆಯ ಇಳಕಲ್ ನಗರದ ಗಾಂಧಿಚೌಕ್ ಬಳಿ ನಡೆದಿದ್ದು, ಘಟನೆಯ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಬೆಚ್ಚಿಬೀಳಿಸುವಂತಿದೆ.
ಸುಮಾರು 11 ಗಂಟೆಯ ಸಮಯದಲ್ಲಿ ವ್ಯಕ್ತಿ ರಾತ್ರಿ ಮನೆಗೆ ತೆರಳುತ್ತಿದ್ದರು. ಈ ವೇಳೆ ಬೀದಿ ನಾಯಿಗಳು ಗುಂಪಾಗಿ ಎಂಟ್ರಿ ಕೊಟ್ಟಿವೆ.
ಏಕಾಏಕಿ ವ್ಯಕ್ತಿಯ ಮೇಲೆ ದಾಳಿ ನಡೆಸಿದ ಬೀದಿನಾಯಿಗಳು, ವ್ಯಕ್ತಿಯನ್ನು ರಸ್ತೆಯಲ್ಲಿ ಉರುಳಿಸಿ ಉರುಳಿಸಿ ಕಚ್ಚಿವೆ. ಬೀದಿನಾಯಿಗಳ ದಾಳಿಯಿಂದ ತಪ್ಪಿಸಿಕೊಳ್ಳಲು ವ್ಯಕ್ತಿ ಎದ್ದು ಬಿದ್ದು ಓಡುತ್ತಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಇನ್ನೂ ಬೀದಿನಾಯಿಯ ದಾಳಿಗೊಳಗಾದ ವ್ಯಕ್ತಿಯ ವಿವರಗಳು ಇನ್ನೂ ಲಭ್ಯವಾಗಿಲ್ಲ. ಅದೃಷ್ಟವಶಾತ್ ವ್ಯಕ್ತಿಗೆ ಪ್ರಾಣಾಪಾಯವಾಗಿಲ್ಲ, ವ್ಯಕ್ತಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಇತ್ತೀಚೆಗಿನ ದಿನಗಳಲ್ಲಿ ಬೀದಿನಾಯಿಗಳ ಕಾಟದಿಂದಾಗಿ ಸಾರ್ವಜನಿಕರು ರಸ್ತೆಯಲ್ಲಿ ಓಡಾಡದಂತಹ ಸ್ಥಿತಿ ನಿರ್ಮಾಣವಾಗುತ್ತಿದೆ. ಈ ಬಗ್ಗೆ ಅಧಿಕಾರಿಗಳು ಗಮನಿಸಿ ಪರಿಹಾರ ಮಾರ್ಗ ಕಂಡುಕೊಳ್ಳಬೇಕು ಅನ್ನೋ ಒತ್ತಾಯ ಕೂಡ ಕೇಳಿ ಬಂದಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth