ವಿದ್ಯಾರ್ಥಿನಿಯರಿಗೆ ಮರ್ಮಾಂಗ ತೋರಿಸಿ ಪರಾರಿಯಾದ ಬೀದಿ ಕಾಮುಕ!

ಬೆಂಗಳೂರು: ಬೀದಿ ಕಾಮುಕರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆಯೇ ಎನ್ನುವ ಅನುಮಾನ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡೆದ ಈ ಘಟನೆಯಿಂದ ಸೃಷ್ಟಿಯಾಗಿದೆ. ಹಾಡಹಗಲೇ ಕಾಮುಕನೋರ್ವ ವಿದ್ಯಾರ್ಥಿನಿಯರ ಮುಂದೆ ಅಸಭ್ಯವಾಗಿ ವರ್ತಿಸಿರುವ ಘಟನೆ ಬೆಳಕಿಗೆ ಬಂದಿದೆ.
ವಿ.ವಿ. ಪುರಂ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಬೈಕ್ ನಲ್ಲಿ ಬಂದ ಕಾಮುಕನೊಬ್ಬ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿನಿಯರಿಗೆ ತನ್ನ ಖಾಸಗಿ ಅಂಗ ಪ್ರದರ್ಶಿಸಿರುವ ಘಟನೆ ನಡೆದಿದೆ.
ಕಾಮುಕ ಮುಖಕ್ಕೆ ಬಟ್ಟೆ ಕಟ್ಟಿಕೊಂಡಿದ್ದು, ಯುವತಿಯರು ಇರುವ ಕಡೆ ಬಂದು ಬೈಕ್ ನಿಲ್ಲಿಸಿ ಮರ್ಮಾಂಗ ತೋರಿಸಿ ಸ್ಥಳದಿಂದ ಎಸ್ಕೇಪ್ ಆಗಿದ್ದಾನೆ.
ಕಾಮುಕನ ಕೃತ್ಯ ಮೊಬೈಲ್ ನಲ್ಲಿ ಸೆರೆಯಾಗಿದ್ದು, ಘಟನೆಯಿಂದ ನೊಂದ ವಿದ್ಯಾರ್ಥಿನಿಯರು .ವಿ.ಪುರಂ ಪೊಲೀಸರಿಗೆ ದೂರು ನೀಡಿ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ. ಪೊಲೀಸರು ಘಟನೆ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದು ಕಾಮುಕನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.
ಬೆಂಗಳೂರಿನಂತಹ ದೊಡ್ಡ ನಗರದಲ್ಲಿ ಇಂತಹ ಕೃತ್ಯ ಮಾಡಿದರೆ, ಯಾರೂ ಹಿಡಿಯುವುದಿಲ್ಲ ಎನ್ನುವ ಅಹಂಕಾರ ಇಂತಹ ಕಾಮುಕರದ್ದಾಗಿದೆ. ಇವರನ್ನು ಮಟ್ಟ ಹಾಕುವ ಕೆಲಸವನ್ನು ಪೊಲೀಸರು ಮಾಡಬೇಕು ಎನ್ನು ಒತ್ತಾಯ ಕೇಳಿ ಬಂದಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/JItjEWZ9e5fBWDL6CkTr97