ಕುಡಿದು ವಾಹನ ಚಲಾಯಿಸುವವರ ವಿರುದ್ಧ ಕೇರಳದಲ್ಲಿ ನಿರ್ದಾಕ್ಷಿಣ್ಯ ಕ್ರಮ!
ತಿರುವನಂತಪುರಂ: ಮದ್ಯಮಾರಾಟ ನಿಷೇಧದ ನಡುವೆಯೂ ಕೇರಳದಲ್ಲಿ ಕುಡಿದು ವಾಹನ ಚಲಾಯಿಸುತ್ತಿರುವ ಪ್ರಕರಣಗಳು ಪತ್ತೆಯಾದ ಹಿನ್ನೆಲೆಯಲ್ಲಿ ಕೇರಳ ಪೊಲೀಸರು ಕಟ್ಟುನಿಟ್ಟಿನ ಕ್ರಮವನ್ನ ಜಾರಿಗೊಳಿಸಲು ಮುಂದಾಗಿದ್ದಾರೆ.
ಕುಡಿದು ವಾಹನ ಚಲಾಯಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಕೇರಳದಲ್ಲಿ 3,764 ಪ್ರಕರಣಗಳು ದಾಖಲಾಗಿವೆ. ಸಂಚಾರ ವಿಭಾಗದ ಐಜಿಪಿ ಎ. ಅಕ್ಬರ್ ಸೂಚನೆ ಮೇರೆಗೆ ಕೇರಳದಾದ್ಯಂತ ಜಿಲ್ಲಾ ಪೊಲೀಸರ ಮೇಲ್ವಿಚಾರಣೆಯಲ್ಲಿ ಕಾರ್ಯಾಚರಣೆ ನಡೆಸಲಾಗಿದೆ.
ಫೆಬ್ರವರಿ 6ರಿಂದ ಫೆಬ್ರವರಿ 12ರವರೆಗೆ ಕೇರಳದಾದ್ಯಂತ ಒಟ್ಟು 3,764 ಕುಡಿದು ವಾಹನ ಚಲಾಯಿಸಿದ ಪ್ರಕರಣಗಳು ಪತ್ತೆಯಾಗಿದ್ದು, 1,911 ಲೈಸೆನ್ಸ್ ಗಳನ್ನು ರದ್ದುಪಡಿಸಲಾಗಿದೆ. 894 ಪರವಾನಗಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw




























