ಪುಟ್ಪಾತ್ ಗಳ ಮೇಲೆ ವಾಹನ ನಿಲುಗಡೆ ಮಾಡುವವರ ವಿರುದ್ಧ ಕಠಿಣ ಕ್ರಮಕೈಗೊಳ್ಳಿ: ಸಮಾಜ ಸೇವಕ ನಿತ್ಯಾನಂದ ಒಳಕಾಡು ಒತ್ತಾಯ

ಉಡುಪಿ ನಗರ ವ್ಯಾಪ್ತಿಯಲ್ಲಿ ಬರುವ ಎಲ್ಲ ಪುಟ್ಪಾತ್ ಗಳ ಮೇಲೆ ವಾಹನಗಳನ್ನು ನಿಲುಗಡೆ ಮಾಡಲಾಗುತ್ತಿದ್ದು, ಇದರಿಂದ ಸಾರ್ವಜನಿಕರ ಸಂಚಾರಕ್ಕೆ ತೊಂದರೆ ಆಗುತ್ತಿದೆ.
ಆಯಾಕಟ್ಟಿನ ಸ್ಥಳ, ವಾಹನ ಸಂಚಾರ ದಟ್ಟನೆ ಇರುವ ಸ್ಥಳಗಳಲ್ಲಿ ಸಾರ್ವಜನಿಕರು ರಸ್ತೆಯ ಮೇಲೆಯೇ ಓಡಾಡಬೇಕಾದ ಪರಿಸ್ಥಿತಿ ಎದುರಾಗಿದೆ. ಇದರಿಂದ ಅಪಘಾತಗಳು ನಡೆಯುವ ಸಾಧ್ಯತೆಯೂ ಹೆಚ್ಚಿದೆ. ಅಲ್ಲದೆ, ಪುಟ್ಪಾತ್ ಮೇಲೆ ಹಾಕಿರುವ ಸಿಮೆಂಟ್ ಸ್ಲಾಬ್ ಗಳು ವಾಹನಗಳ ಭಾರಕ್ಕೆ ಮುರಿದು ಹೋಗುತ್ತಿದೆ.
ಹಾಗಾಗಿ ನಗರಸಭೆ ಕೂಡಲೇ ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ, ಪುಟ್ಪಾತ್ ಗಳ ಮೇಲೆ ವಾಹನ ಪಾರ್ಕ್ ಮಾಡುವವರ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕು. ಹಾಗೆಯೇ ಪುಟ್ಪಾತ್ ಮೇಲೆ ವಾಹನ ನಿಲುಗಡೆ ಮಾಡುವುದನ್ನು ನಿರ್ಬಂಧಿಸಬೇಕು ಎಂದು ಸಮಾಜ ಸೇವಕ ನಿತ್ಯಾನಂದ ಒಳಕಾಡು ಆಗ್ರಹಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw