12:20 AM Saturday 23 - August 2025

ಅನೈತಿಕ ಪೊಲೀಸ್ ಗಿರಿ, ಸುಳ್ಳು ಸುದ್ದಿಗಳನ್ನು ಹಬ್ಬಿಸಿದರೆ, ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ

siddaramaiah-1
01/08/2023

ಉಡುಪಿ: ಅನೈತಿಕ ಪೊಲೀಸ್ ಗಿರಿ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳನ್ನು ಹಬ್ಬಿಸಿದರೆ, ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಉಡುಪಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಅನೈತಿಕ ಪೊಲೀಸ್ ಗಿರಿ ಯಾರೇ ಮಾಡಿದರೂ ಕೂಡ ನಿರ್ದಾಕ್ಷಿಣ್ಯವಾಗಿ ಕ್ರಮ ತೆಗೆದುಕೊಳ್ಳಲು ತಿಳಿಸಲಾಗಿದೆ. ಯಾರೂ ಕಾನೂನನ್ನು ಕೈಗೆ ತೆಗೆದುಕೊಳ್ಳುವಂತಿಲ್ಲ ಎಂದು ಪೊಲೀಸರಿಗೆ ಸೂಚಿಸಲಾಗಿದೆ ಎಂದರು.

ಸಾಮಾಜಿಕ ಜಾಲತಾಣಗಳಲ್ಲಿ ಸರ್ಕಾರದ ವಿರುದ್ಧ ಅಥವಾ ವ್ಯಕ್ತಿ ಯ ವಿರುದ್ಧವಾಗಿ ಅನಗತ್ಯವಾಗಿ ಸುಳ್ಳು ಸುದ್ದಿಗಳನ್ನು ಹಬ್ಬಿಸಿದರೆ ಅವರ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಇದೇ ವೇಳೆ ಅವರು ತಿಳಿಸಿದರು.

ಟೀಕೆ ಮಾಡಿದರೂ ಕ್ರಮ ಕೈಗೊಳ್ಳುತ್ತಿದ್ದೀರಿ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಟೀಕೆ ಮಾಡಿದರೆ ಕ್ರಮ ತೆಗೆದುಕೊಳ್ಳುವುದಿಲ್ಲ. ಸುಳ್ಳು ಸುದ್ದಿ ಹಬ್ಬಿಸಿದರೆ ತೆಗೆದುಕೊಳ್ಳಲಾಗುವುದು ಎಂದರು. ಕುಟುಂಬದವರ ಮೇಲೆ ಸುಳ್ಳು ಸುದ್ದಿ ಹಬ್ಬಿಸುವುದು, ವೈಯಕ್ತಿಕವಾಗಿ ತೇಜೋವಧೆ ಮಾಡುವುದು ಬೇರೆ ಎಂದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 74835 51849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/D73015iu7jn2glm2MECosd

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version