ಮಹಿಳೆಯರನ್ನು ಬೆತ್ತಲೆಗೊಳಿಸಿ, ಗ್ಯಾಂಗ್ ರೇಪ್ ಪ್ರಕರಣ: ಓರ್ವ ಆರೋಪಿ ಅರೆಸ್ಟ್ - Mahanayaka
6:51 PM Wednesday 22 - October 2025

ಮಹಿಳೆಯರನ್ನು ಬೆತ್ತಲೆಗೊಳಿಸಿ, ಗ್ಯಾಂಗ್ ರೇಪ್ ಪ್ರಕರಣ: ಓರ್ವ ಆರೋಪಿ ಅರೆಸ್ಟ್

manipur
20/07/2023

ಮಣಿಪುರದಲ್ಲಿ ಮಹಿಳೆಯರನ್ನು ಬೆತ್ತಲೆಗೊಳಿಸಿ ಮೆರವಣಿಗೆ ನಡೆಸಿ, ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆಗೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಬಂಧಿಸಲಾಗಿದೆ.

ಘಟನೆ ನಡೆದು ಬರೋಬ್ಬರಿ 48 ದಿನಗಳ ಬಳಿಕ ಆರೋಪಿಯನ್ನು ಬಂಧಿಸಲಾಗಿದೆ.  ಮೇ 4ರಂದು ಆರೋಪಿ ಹಾಗೂ ದುಷ್ಕರ್ಮಿಗಳ ದೊಡ್ಡ ಗುಂಪೊಂದು ಮಹಿಳೆಯರನ್ನು ಬೆತ್ತಲೆ ಮೆರವಣಿಗೆ ನಡೆಸಿ ಅತ್ಯಾಚಾರ ನಡೆಸಿತ್ತು. ಈ ವಿಡಿಯೋ ಅಂತರಾಷ್ಟ್ರೀಯಮಟ್ಟದಲ್ಲಿ ಸುದ್ದಿಯಾಗಿದ್ದು,  ಇಡೀ ದೇಶವೇ ತಲೆತಗ್ಗಿಸುವಂತಾಗಿತ್ತು.

ಸದ್ಯ ಬಂಧಿತ ಆರೋಪಿಯನ್ನು ಹುಯಿರೆಮ್ ಹೀರೋದಾಸ್ ಮೈತಿಯಿ ಎಂದು ಗುರುತಿಸಲಾಗಿದೆ. ವಿಡಿಯೋವನ್ನು ಪರಿಶೀಲಿಸಿದ ಬಳಿಕ ಇಂದು ಬೆಳಗ್ಗೆ ಪೊಲೀಸರು ಬಂಧಿಸಿದ್ದಾರೆ.

ಇನ್ನೂ ಮಹಿಳೆಯರ ಮೇಲೆ ನಡೆದಿರುವ ದೌರ್ಜನ್ಯಕ್ಕೆ ಕೆಲವು ಪೊಲೀಸರು ಕೂಡ ಸಹಕರಿಸಿರುವ ಆರೋಪಗಳು ಕೂಡ ಕೇಳಿ ಬಂದಿದೆ. ಮಣಿಪುರದ ಚುರಾಚಂದಾಪುರದಲ್ಲಿ ಕುಕಿ ಸಮುದಾಯ ಘಟನೆಯನ್ನ ಖಂಡಿಸಿ ತೀವ್ರ ಪ್ರತಿಭಟನೆ ನಡೆಸಿದೆ. ಈ ಪ್ರತಿಭಟನೆ ಮತ್ತೆ ಮಣಿಪುರದಲ್ಲಿ ಆತಂಕದ ಪರಿಸ್ಥಿತಿಯನ್ನು ಸೃಷ್ಟಿಸಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ74835 51849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿhttps://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿhttps://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿhttps://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ