ಪ್ರತಿಷ್ಠಿತ ಮಹಿಳಾ ವಿವಿಯಲ್ಲಿ ವಿದ್ಯಾರ್ಥಿನಿಗೆ ಪ್ರೊಫೆಸರ್ ನಿಂದ ಲೈಂಗಿಕ ಕಿರುಕುಳ ಆರೋಪ

ವಿಜಯಪುರ: ರಾಜ್ಯದ ಪ್ರತಿಷ್ಠಿತ ವಿಶ್ವವಿದ್ಯಾಲಯದಲ್ಲಿ ಪಿಹೆಚ್ ಡಿ ವಿದ್ಯಾರ್ಥಿನಿಗೆ ಮ್ಯಾನೇಜ್ಮೆಂಟ್ ವಿಭಾಗದ ಪ್ರೊ.ಮಲ್ಲಿಕಾರ್ಜುನ ಎನ್.ಎಲ್ . ರವರು ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ರಾಜ್ಯದ ಏಕೈಕ ಮಹಿಳಾ ವಿಶ್ವವಿದ್ಯಾಲಯವಾಗಿರುವ ವಿಜಯಪುರದಲ್ಲಿರುವ ಅಕ್ಕಮಹಾದೇವಿ ವಿಶ್ವವಿದ್ಯಾಲಯದಲ್ಲಿ ಈ ಘಟನೆ ನಡೆದಿದೆ.
ಪಿ ಹೆಚ್ ಡಿ ವಿದ್ಯಾರ್ಥಿಯು ತನ್ನ ಮೇಲೆ ಪ್ರೊ.ಮಲ್ಲಿಕಾರ್ಜುನ ಎನ್.ಎಲ್. ರವರು ಲೈಂಗಿಕ ಕಿರುಕುಳವೆಸಗಿದ್ದಾರೆ ಎಂದು ಆರೋಪಿಸಿ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ತುಳಸೀಮಾಲಾ ಅವರಿಗೆ ಫೆಬ್ರವರಿ 27 ರಂದು ದೂರು ನೀಡಿದ್ದಾರೆ.
ವಿದ್ಯಾರ್ಥಿನಿ ನೀಡಿರುವ ದೂರನ್ನು ಕುಲಪತಿ ಪ್ರೊ.ತುಳಸೀಮಾಲಾ ಅವರು ಆಂತರಿಕ ದೂರು ಸಮಿತಿಗೆ ರವಾನಿಸಲಿದ್ದಾರೆ. ಬಳಿಕ ಆಂತರಿಕ ದೂರು ಸಮಿತಿ ವಿಚಾರಣೆ ನಡೆಸಲಿದೆ.
ಪ್ರೊ. ಮಲ್ಲಿಕಾರ್ಜುನ ಎನ್.ಎಲ್. ರವರು 2017ರಿಂದ ಈ ವಿಶ್ವವಿದ್ಯಾಲಯದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ ಎನ್ನಲಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth