10 ಅಂಕ ಕಡಿಮೆ ಬಂದಿದ್ದಕ್ಕೆ ನೊಂದು ವಿದ್ಯಾರ್ಥಿನಿ ಆತ್ಮಹತ್ಯೆ!
ಹಿರಿಯಡ್ಕ: ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದ ಬಗ್ಗೆ ಮಾನಸಿಕ ವಾಗಿ ನೊಂದ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ನ.27ರಂದು ಸಂಜೆ ವೇಳೆ ಪೆರ್ಡೂರು ಎಂಬಲ್ಲಿ ನಡೆದಿದೆ.
ಮೃತರನ್ನು ಹೆಬ್ರಿಯ ಎಸ್ಆರ್ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ, ಪೆರ್ಡೂರು ನಿವಾಸಿ ತೃಪ್ತಿ(17) ಎಂದು ಗುರುತಿಸ ಲಾಗಿದೆ.
ಉತ್ತಮವಾಗಿ ಓದುತ್ತಿದ್ದ ತೃಪ್ತಿ, ಇತ್ತೀಚಿಗೆ ನಡೆದ ಪರೀಕ್ಷೆಯಲ್ಲಿ 10 ಅಂಕ ಕಡಿಮೆ ಬಂದಿರುವ ಬಗ್ಗೆ ನೊಂದಿದ್ದಾರೆನ್ನಲಾಗಿದೆ.
ಇದೇ ಕಾರಣಕ್ಕೆ ಮನನೊಂದ ಅವರು ಮನೆಯ ಮಲಗುವ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka