ಮಂಚಕ್ಕೆ ನೇಣು ಬಿಗಿದು ವಿದ್ಯಾರ್ಥಿನಿ ಸಾವಿಗೆ ಶರಣು - Mahanayaka

ಮಂಚಕ್ಕೆ ನೇಣು ಬಿಗಿದು ವಿದ್ಯಾರ್ಥಿನಿ ಸಾವಿಗೆ ಶರಣು

bindu shree (1)
23/12/2024


Provided by

ಕೋಲಾರ: ವಿದ್ಯಾರ್ಥಿನಿಯೊಬ್ಬಳು ವಸತಿ ನಿಲಯದಲ್ಲಿ ತಾನು ಮಲಗುವ ಮಂಚಕ್ಕೆ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿರುವ ಆಘಾತಕಾರಿ ಘಟನೆ ಕೋಲಾರದಲ್ಲಿ ನಡೆದಿದೆ.

ಕೋಲಾರದ ಶ್ರೀನಿವಾಸಪುರ ಪಟ್ಟಣದ ಹೊರವಲಯದಲ್ಲಿರುವ ಹಾಸ್ಟೆಲ್ ನಲ್ಲಿ ಈ ಘಟನೆ ನಡೆದಿದೆ. ಖಾಸಗಿ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಓದುತ್ತಿರುವ ಬಿಂದುಶ್ರೀ(17) ಸಾವಿಗೆ ಶರಣಾದ ವಿದ್ಯಾರ್ಥಿನಿಯಾಗಿದ್ದಾಳೆ.

ವಿದ್ಯಾರ್ಥಿನಿ ಚಿಕ್ಕಬಳ್ಳಾಪುರ ಜಿಲ್ಲೆಯ ಗಂಗರೇಕಾಲುವೆ ಗ್ರಾಮದವಳಾಗಿದ್ದಾಳೆ. ಆತ್ಮಹತ್ಯೆಗೆ ನಿಖರ ಕಾರಣಗಳು ತಿಳಿದು ಬಂದಿಲ್ಲ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ. ಘಟನೆಯ ಮಾಹಿತಿ ತಿಳಿದು ಪೋಷಕರು ಆಗಮಿಸಿದ್ದಾರೆ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/HEkqDgrW2BlJLad5kZ1DX7

ಇತ್ತೀಚಿನ ಸುದ್ದಿ