ಈಜಲು ಹೋಗಿ ನೀರಲ್ಲಿ ಮುಳುಗಿ ವಿದ್ಯಾರ್ಥಿ ಸಾವು

ಚಾಮರಾಜನಗರ: ಸ್ಮೇಹಿತರೊಟ್ಟಿಗೆ ಈಜಲು ತೆರಳಿದ್ದ ವೇಳೆ ನೀರಿನಲ್ಲಿ ಮುಳುಗಿ ವಿದ್ಯಾರ್ಥಿ ಮೃತಪಟ್ಟಿರುವ ಘಟನೆ ಚಾಮರಾಜನಗರ ತಾಲೂಕಿನ ಎಣ್ಣೆಹೊಳೆ ಕೆರೆಯಲ್ಲಿ ನಡೆದಿದೆ.
ಚಾಮರಾಜನಗರ ತಾಲೂಕಿನ ವೆಂಕಟಯ್ಯನ ಛತ್ರದ ಸಿದ್ದರಾಜು(19) ಮೃತ ದುರ್ದೈವಿ. ಈತ ನಾಲ್ವರು ಸ್ನೇಹಿತರೊಟ್ಟಿಗೆ ಭಾನುವಾರ ಈಜಲು ತೆರಳಿದ್ದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಮೇಲೆ ಬರಲಾರದೇ ಅಸುನೀಗಿದ್ದಾನೆ. ಸಿದ್ದರಾಜು ಇತ್ತೀಚೆಗಷ್ಟೇ ಮೈಸೂರಿನ ಕಾಲೇಜೊಂದಕ್ಕೆ ಬಿಎ ಪದವಿಗಾಗಿ ಪ್ರವೇಶ ಪಡೆದಿದ್ದ ಎಂದು ತಿಳಿದುಬಂದಿದೆ.
ಚಾಮರಾಜನಗರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಸಿಮ್ಸ್ ಗೆ ರವಾನೆ ಮಾಡಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JdaVhZJabeA0V7XQ5ZJp92
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw