ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಹಠಾತ್ ಅನಾರೋಗ್ಯದಿಂದ ನಿಧನ - Mahanayaka

ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಹಠಾತ್ ಅನಾರೋಗ್ಯದಿಂದ ನಿಧನ

rashmitha
02/06/2023

ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಹಠಾತ್ ಅನಾರೋಗ್ಯದಿಂದ ನಿಧನ ಹೊಂದಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ರೆಂಜಿಲಾಡಿ ಗ್ರಾಮದ ನಿಡ್ಮೇರು ಎಂಬಲ್ಲಿ ನಡೆದಿದೆ.

ರಶ್ಮಿತಾ‌(18) ಮೃತ ಯುವತಿ. ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ಬಿಎಸ್ಸಿ ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದ ಈಕೆ, ಕೆಲ ದಿನಗಳಿಂದ ಅನಾರೋಗ್ಯ ಪೀಡಿತಳಾಗಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ವೈದ್ಯಕೀಯ ಪರೀಕ್ಷೆಯಲ್ಲಿ ಯಾವುದೇ ಸಮಸ್ಯೆ ಕಂಡು ಬಂದಿರಲಿಲ್ಲ. ಆರೋಗ್ಯವಾಗಿದ್ದ ರಶ್ಮಿತಾ ಹಠಾತ್ ಕುಸಿದು ಬಿದ್ದು ಪ್ರಾಣ ಕಳೆದುಕೊಂಡಿದ್ದಾರೆ.

ಮುಡಾ ಉದ್ಯೋಗಿ ಸಾವಿಗೆ ಶರಣು:

kirthan kumar

ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಉದ್ಯೋಗಿ ಕೀರ್ತನ್ ಕುಮಾರ್ (36) ಎಂಬುವವರು ಇಂದು ನೇಣು ಬಿಗಿದು ಸಾವಿಗೆ ಶರಣಾಗಿದ್ದಾರೆ.

ಅನಾರೋಗ್ಯದಿಂದ ಬೇಸತ್ತ ಅವರು ಮುಡಾ ಕಚೇರಿ ಆವರಣದ ಕೋಣೆಯೊಂದರಲ್ಲಿ ಸಾವಿಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ. ವಿವಾಹಿತರಾಗಿದ್ದ ಅವರಿಗೆ ಪತ್ನಿ ಮತ್ತು ಮಗು ಇದೆ. ಈ ಬಗ್ಗೆ ಉರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ