ಈಜಲು ತೆರಳಿದ್ದ 15 ವರ್ಷದ ಬಾಲಕ ನೀರಲ್ಲಿ ಮುಳುಗಿ ಸಾವು
ನೇತ್ರಾವತಿ ನದಿಯಲ್ಲಿ ಈಜಲು ತೆರಳಿದ್ದ ಬಾಲಕನೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್ ಸಮೀಪದ ಬ್ರಹ್ಮರಕೂಟ್ಲು ಎಂಬಲ್ಲಿ ಶುಕ್ರವಾರ ಸಂಜೆ ನಡೆದಿದೆ.
ಬಿ.ಸಿ.ರೋಡ್ ಕೈಕಂಬ ಪರ್ಲ್ಯ ಮದ್ದ ನಿವಾಸಿ ಜುನೈದ್ ಎಂಬವರ ಪುತ್ರ ಸಲ್ಮಾನ್ (15) ಮೃತಪಟ್ಟ ಬಾಲಕ. ಶುಕ್ರವಾರ ಶಾಲೆಗೆ ರಜೆ ಇದ್ದ ಕಾರಣ ನಾಲ್ಕು ಮಂದಿ ಗೆಳೆಯರು ಸಂಜೆಯ ವೇಳೆಗೆ ಬ್ರಹ್ಮರಕೂಟ್ಲು ಬಂಟರ ಭವನದ ಬಳಿ ನೇತ್ರಾವತಿ ನದಿಯಲ್ಲಿ ಈಜಲು ತೆರಳಿದ್ದರು.
ಈಜುತ್ತಿದ್ದ ವೇಳೆ ಸಲ್ಮಾನ್ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಮೃತ ಸಲ್ಮಾನ್ ಬಿ.ಸಿ.ರೋಡ್ ಕೈಕಂಬದ ಬೆಸ್ಟ್ ಆಂಗ್ಲ ಮಾಧ್ಯಮ ಶಾಲೆಯ ಎಸೆಸೆಲ್ಸಿ ವಿದ್ಯಾರ್ಥಿಯಾಗಿದ್ದಾನೆ.
ಸ್ಥಳಕ್ಕೆ ಬಂಟ್ವಾಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಮೃತದೇಹವನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GoQnwP3qNkmAbAPcjb8n8F
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka