ಬೆಂಗಳೂರಿನಿಂದ ಕಾಫಿನಾಡಿಗೆ ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿ ನದಿಯಲ್ಲಿ ಮುಳುಗಿ ಸಾವು - Mahanayaka
10:29 PM Tuesday 28 - October 2025

ಬೆಂಗಳೂರಿನಿಂದ ಕಾಫಿನಾಡಿಗೆ ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿ ನದಿಯಲ್ಲಿ ಮುಳುಗಿ ಸಾವು

srngeri
19/11/2022

ಚಿಕ್ಕಮಗಳೂರು: ಬೆಂಗಳೂರಿನಿಂದ ಕಾಫಿನಾಡಿಗೆ ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿಯೋರ್ವ ನೀರುಪಾಲಾಗಿ ಮೃತಪಟ್ಟ ಘಟನೆ ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ತಾಲೂಕಿನಲ್ಲಿ ನಡೆದಿದೆ.

ಶೃಂಗೇರಿಯ ತುಂಗಾ ನದಿಯಲ್ಲಿ ಈಜುವಾಗ ನೀರಿನಲ್ಲಿ ಮುಳುಗಿ ವಿದ್ಯಾರ್ಥಿ ಸಾವನ್ನಪ್ಪಿದ್ದು, ಶೃಂಗೇರಿ ಶಾರದಾಂಬೆ ದೇಗುಲದ ಪಕ್ಕದಲ್ಲೇ ಈ ಅವಘಡ ಸಂಭವಿಸಿದೆ.

ಜಿಗಣಿ ಕೃಷ್ಣ ಕಾಲೇಜಿನ ವಿದ್ಯಾರ್ಥಿ ಚಂದನ್ ಮೃತ ದುರ್ದೈವಿ ಎಂದು ಗುರುತಿಸಲಾಗಿದ್ದು, ಈತ ದ್ವಿತೀಯ ಪದವಿಯಲ್ಲಿ ವ್ಯಾಸಂಗ ಮಾಡುತ್ತಿದ್ದ. ಕಾಲೇಜಿನಿಂದ ಸುಮಾರು 60ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪ್ರವಾಸಕ್ಕೆ ಬಂದಿದ್ದರು.  ಚಿಕ್ಕಮಗಳೂರು ಜಿಲ್ಲೆ  ಶೃಂಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ