ವಿದ್ಯಾರ್ಥಿನಿ ನಿಕಿತಾ ಸಾವು ಪ್ರಕರಣ: ತನಿಖೆಗೆ ಆಗ್ರಹಿಸಿ ಆಸ್ಪತ್ರೆಯ ಎದುರು ಎಬಿವಿಪಿ ಪ್ರತಿಭಟನೆ

ಉಡುಪಿ: ವಿದ್ಯಾರ್ಥಿನಿ ನಿಕಿತಾ ಸಾವು ಪ್ರಕರಣದ ಸೂಕ್ತ ತನಿಖೆಗೆ ಆಗ್ರಹಿಸಿ ಎಬಿವಿಪಿ ಸಂಘಟನೆ ವತಿಯಿಂದ ನಗರದ ಸಿಟಿ ಆಸ್ಪತ್ರೆಯ ಎದುರು ಇಂದು ಪ್ರತಿಭಟನೆ ನಡೆಸಲಾಯಿತು.
ನೂರಾರು ಸಂಖ್ಯೆಯಲ್ಲಿ ಜಮಾಯಿಸಿದ್ದ ವಿದ್ಯಾರ್ಥಿಗಳು ಸಿಟಿ ಆಸ್ಪತ್ರೆಗೆ ಮುತ್ತಿಗೆ ಹಾಕಲು ಯತ್ನಿಸಿದರು. ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸರು ವಿದ್ಯಾರ್ಥಿಗಳನ್ನು ರಸ್ತೆಯಲ್ಲೇ ತಡೆದು ನಿಲ್ಲಿಸಿದರು. ಈ ವೇಳೆ ಪೊಲೀಸರು ಹಾಗೂ ವಿದ್ಯಾರ್ಥಿಗಳ ನಡುವೆ ವಾಗ್ವಾದ ನಡೆಯಿತು.
ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಪಡುಬಿದ್ರಿ ಸಮೀಪದ ಕೆಮ್ಮುಂಡೇಲಿನ ನಿಕಿತಾ, ಕಳೆದ ಭಾನುವಾರ ಬೆಳಿಗ್ಗೆ ನಗರದ ಸಿಟಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಳು. ವೈದ್ಯರ ನಿರ್ಲಕ್ಷ್ಯದಿಂದ ನಿಕಿತಾ ಸಾವಿಗೀಡಾದ್ದಾಳೆ ಎಂದು ಮನೆಯವರು ಆರೋಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಎಬಿವಿಪಿ ಸಂಘಟನೆಯ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw