ವಿದ್ಯಾರ್ಥಿನಿ ಶವವಾಗಿ ಪತ್ತೆ: ನಾಲ್ಕು ದಿನಗಳ ಹಿಂದೆ ನಾಪತ್ತೆಯಾಗಿದ್ದ ವುಮೆನ್ಸ್ ಕಾಲೇಜಿನ ವಿದ್ಯಾರ್ಥಿನಿ

chikkamagaluru crime news
24/12/2023

ಚಿಕ್ಕಮಗಳೂರು: ನಾಲ್ಕು ದಿನಗಳ ಹಿಂದೆ ಕಾಣೆಯಾಗಿದ್ದ ಕಾಲೇಜು ವಿದ್ಯಾರ್ಥಿನಿ ಶವವಾಗಿ ಪತ್ತೆಯಾಗಿದ್ದಾಳೆ.

ಮೂಡಿಗೆರೆ ತಾಲ್ಲೂಕು ಗೋಣಿಬೀಡು ಠಾಣೆ ವ್ಯಾಪ್ತಿಯ ಜಿ.ಹೊಸಳ್ಳಿ ಗ್ರಾಮದಲ್ಲಿ ಮೊನ್ನೆ ಗುರುವಾರ ಸಂಜೆಯಿಂದ ಸೃಷ್ಟಿ ಎಂಬ ಯುವತಿ ಕಾಣೆಯಾಗಿದ್ದಳು.

ಕಾಣೆಯಾಗಿದ್ದ ಯುವತಿಗಾಗಿ ತೀವ್ರ ಹುಡುಕಾಟ ನಡೆಸಲಾಗಿತ್ತು. ಇಂದು ಮುಂಜಾನೆ ಗ್ರಾಮದ ಕುಡಿಯುವ ನೀರು ಯೋಜನೆಯ ಬಾವಿಯಲ್ಲಿ ಯುವತಿಯ ಶವ ಪತ್ತೆಯಾಗಿದೆ.

ಜಿ.ಹೊಸಳ್ಳಿ ಗ್ರಾಮದ ಕೃಷ್ಣಮೂರ್ತಿ ಎನ್ನುವವರ ಪುತ್ರಿ ಸೃಷ್ಟಿ(19ವರ್ಷ) ಹಾಸನದ ಮಹಿಳಾ ಕಾಲೇಜಿನಲ್ಲಿ ಪದವಿ ವ್ಯಾಸಂಗ ಮಾಡುತ್ತಿದ್ದರು. ಹಾಸ್ಟೆಲ್ ನಿಂದ ಕಾಲೇಜಿಗೆ ಹೋಗುತ್ತಿದ್ದರು ಎಂದು ತಿಳಿದು ಬಂದಿದೆ.

ಕಳೆದ ವಾರ ಮನೆಗೆ ಬಂದಿದ್ದ ಸೃಷ್ಟಿ ಡಿಸೆಂಬರ್ 21 ರ ಗುರುವಾರ ಸಂಜೆ ಇದ್ದಕ್ಕಿದ್ದಂತೆ ಮನೆಯಿಂದ ನಾಪತ್ತೆಯಾಗಿದ್ದಳು. ಸೃಷ್ಟಿಗಾಗಿ ಸುತ್ತಮುತ್ತಲ ಪ್ರದೇಶಗಳಲ್ಲಿ ತೀವ್ರ ಹುಡುಕಾಟ ನಡೆಸಲಾಗಿತ್ತು ಆದರೆ ಪತ್ತೆಯಾಗಿರಲಿಲ್ಲ.

ಇಂದು ಭಾನುವಾರ ಮುಂಜಾನೆ ಗ್ರಾಮದ ಕುಡಿಯುವ ನೀರಿನ ಮೋಟರ್ ಅಳವಡಿಸಿರುವ ಬಾವಿಯಲ್ಲಿ ಯುವತಿಯ ಶವ ತೇಲುತ್ತಿರುವುದನ್ನು ವಾಟರ್ ಮ್ಯಾನ್ ಗಮನಿಸಿ ಮಾಹಿತಿ ನೀಡಿದ್ದಾರೆ.  ಗೋಣಿಬೀಡು ಠಾಣೆಯಲ್ಲಿ ದೂರು ದಾಖಲಾಗಿದ್ದು ಶವವನ್ನು ಮೇಲೆತ್ತಲು ತಯಾರಿ ನಡೆಸಲಾಗಿದೆ.

ಸೃಷ್ಟಿ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸೃಷ್ಟಿ ತಂದೆ ತಾಯಿ ಮತ್ತು ಇಬ್ಬರು ಸಹೋದರರನ್ನು ಅಗಲಿದ್ದಾರೆ ಹಾಸನದ ವುಮೆನ್ಸ್ ಕಾಲೇಜಿನಲ್ಲಿ ಪ್ರಥಮ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಪ್ರಕರಣದ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕು.

 

ಇತ್ತೀಚಿನ ಸುದ್ದಿ

Exit mobile version