ದೆಹಲಿ-ಮೀರತ್ ಎಕ್ಸ್ ಪ್ರೆಸ್ ವೇನಲ್ಲಿ ಭೀಕರ ಅಪಘಾತ: ವಿದ್ಯಾರ್ಥಿ, ಶಾಲಾ ವ್ಯಾನ್ ಚಾಲಕ ಸಾವು

ದೆಹಲಿಯ ಅಮ್ರೋಹಾದಿಂದ ಜಾಮಿಯಾಗೆ ಮಕ್ಕಳನ್ನು ಕರೆದೊಯ್ಯುತ್ತಿದ್ದ ಶಾಲಾ ವ್ಯಾನ್ ದೆಹಲಿ-ಮೀರತ್ ಎಕ್ಸ್ ಪ್ರೆಸ್ ವೇನಲ್ಲಿ ಶನಿವಾರ ಕಸದ ರಾಶಿಗೆ ಡಿಕ್ಕಿ ಹೊಡೆದ ಪರಿಣಾಮ 10 ವರ್ಷದ ವಿದ್ಯಾರ್ಥಿ ಮತ್ತು ಚಾಲಕ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದಲ್ಲಿ ಹಲವಾರು ಮಕ್ಕಳು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.
ಗಾಜಿಯಾಬಾದ್ ನ ಎಕ್ಸ್ ಪ್ರೆಸ್ ವೇನಲ್ಲಿ ಇಂದು ಮುಂಜಾನೆ ಈ ಘಟನೆ ನಡೆದಿದೆ. ಶಾಲಾ ವ್ಯಾನ್ ಡಂಪರ್ ಗೆ ಡಿಕ್ಕಿ ಹೊಡೆದಿದೆ. ಹಿಂದಿನಿಂದ ಬರುತ್ತಿದ್ದ ಮೂರನೇ ವಾಹನವೂ ಈ ಎರಡು ವಾಹನಗಳಿಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಅಪಘಾತದಲ್ಲಿ ಶಾಲಾ ವ್ಯಾನ್ ಚಾಲಕ ಸಾವನ್ನಪ್ಪಿದ್ದು, ಸುಮಾರು 10 ಮಕ್ಕಳು ಗಾಯಗೊಂಡಿದ್ದಾರೆ. ಹಲವಾರು ಮಕ್ಕಳ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ.
ಗಾಜಿಯಾಬಾದ್ ನ ಕ್ರಾಸಿಂಗ್ ರಿಪಬ್ಲಿಕ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ದೊಡ್ಡ ಅಪಘಾತ ಸಂಭವಿಸಿದೆ. ಲಾಲ್ಕುವಾನ್ನಿಂದ ದೆಹಲಿಗೆ ತೆರಳುತ್ತಿದ್ದ ಕಸದ ಡಂಪರ್ ಅದರ ಹಿಂದೆ ಇತ್ತು. ಇದ್ದಕ್ಕಿದ್ದಂತೆ ವ್ಯಾನ್ ಕ್ರಾಸಿಂಗ್ ಪ್ರದೇಶದಲ್ಲಿ ಡಂಪರ್ ಗೆ ಡಿಕ್ಕಿ ಹೊಡೆದಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth