ಹೆಡ್ ಫೋನ್ ಇಟ್ಟು ಟ್ರ್ಯಾಕ್ ಮೇಲೆ ಕುಳಿತಿದ್ದ ವಿದ್ಯಾರ್ಥಿಗೆ ರೈಲು ಡಿಕ್ಕಿ: ಯುವಕ ಸಾವು

31/10/2024

ರೈಲ್ವೆ ಹಳಿಯ ಮೇಲೆ ಹೆಡ್ ಫೋನ್ ಇಟ್ಟುಕೊಂಡು ಮೊಬೈಲ್ ನೋಡುವುದರಲ್ಲಿ ಮಗ್ನನಾಗಿದ್ದ 20 ವರ್ಷದ ವಿದ್ಯಾರ್ಥಿಗೆ ರೈಲು ಡಿಕ್ಕಿ ಹೊಡೆದ ಪರಿಣಾಮ ಸಾವನ್ನಪ್ಪಿದ ಘಟನೆ ಭೋಪಾಲ್ ನಲ್ಲಿ ನಡೆದಿದೆ.

ಬಿಬಿಎ ವಿದ್ಯಾರ್ಥಿ ಮನ್ರಾಜ್ ತೋಮರ್ ಮತ್ತು ಆತನ ಸ್ನೇಹಿತ ಸಮಾನಾಂತರ ರೈಲ್ವೆ ಹಳಿಗಳ ಮೇಲೆ ಕುಳಿತು ಮೊಬೈಲ್ ನಲ್ಲಿ ಏನನ್ನೋ ನೋಡುತ್ತಿದ್ದಾಗ ಈ ದುರಂತ ಘಟನೆ ನಡೆದಿದೆ. ತೋಮರ್ ತನ್ನ ತಲೆಯಲ್ಲಿ ಹೆಡ್ ಫೋನ್ ಧರಿಸಿದ್ದನು ಮತ್ತು ತನ್ನ ಫೋನ್ ನಲ್ಲಿ ಏನನ್ನೋ ಸ್ಕ್ರಾಲ್ ಮಾಡುತ್ತಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ.
ಇದೇ ವೇಳೆ ಆತನಿಗೆ ರೈಲು ಡಿಕ್ಕಿ ಹೊಡೆದು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ತೋಮರ್ ತನ್ನ ಹೆತ್ತವರ ಏಕೈಕ ಮಗನಾಗಿದ್ದು, ಮರಣೋತ್ತರ ಪರೀಕ್ಷೆಯ ನಂತರ ಅವನ ದೇಹವನ್ನು ಅವರಿಗೆ ಹಸ್ತಾಂತರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj

ಇತ್ತೀಚಿನ ಸುದ್ದಿ

Exit mobile version