2:53 AM Thursday 23 - October 2025

ಅಪ್ಪ, ಅಮ್ಮ ಕ್ಷಮಿಸಿ ಎಂದು ಬರೆದಿಟ್ಟು ವಿದ್ಯಾರ್ಥಿ ಸಾವಿಗೆ ಶರಣು

tejus
12/07/2023

ಡೆತ್‍ನೋಟ್ ಬರೆದಿಟ್ಟು ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿದ್ಯಾರ್ಥಿ ಸಾವಿಗೆ ಶರಣಾದ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.

ತೇಜಸ್ (22) ಸಾವಿಗೆ ಶರಣಾದ ಯುವಕ. ಯಲಹಂಕದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಮೆಕಾನಿಕಲ್ ಇಂಜಿನಿಯರಿಂಗ್ ನಲ್ಲಿ ಆರನೇ ಸೆಮಿಸ್ಟರ್ ನಲ್ಲಿ ಓದುತ್ತಿದ್ದು, ಕಾಲೇಜಿಗೆ ಟಾಪರ್ ಸ್ಟೂಡೆಂಟ್ ಆಗಿದ್ದ.

ತೇಜಸ್ ತನ್ನ  ಸ್ನೇಹಿತ ಮಹೇಶ್ ಗಾಗಿ ಸ್ಲೈಲ್ಸ್ ಪೇ, ಕಿಸಾತ್ ಹಾಗೂ ಕೋಟಕ್ ಮಹೀಂದ್ರಾ ಮೂಲಕ ಲೋನ್ ಪಡೆದಿದ್ದನು. ಆದರೆ ಕಳೆದ ಒಂದು ವರ್ಷದಿಂದ ಸ್ನೇಹಿತ ಮಹೇಶ್ ಇಎಂಐ ಕಟ್ಟಿರಲಿಲ್ಲ. ಈ ಹಿನ್ನೆಲೆಯಲ್ಲಿ ನೀಡಿದ್ದ ಲೋನ್ ಕಂಪನಿಗಳು ವಿಪರೀತ ಟಾರ್ಚರ್ ಕೊಡುತ್ತಿದ್ದವು.

ಈ ಟಾರ್ಚರ್ ತಾಳಲಾರದೆ ಮಂಗಳವಾರ ಡೆತ್ ನೋಟ್‌ನಲ್ಲಿ “ಅಪ್ಪ ಅಮ್ಮ ಕ್ಷಮಿಸಿ” ಎಂದು ಬರೆದಿಟ್ಟು ಸಂಜೆ 6 ಗಂಟೆ ಸುಮಾರಿಗೆ ತಾಯಿಯ ವೇಲ್ ನಿಂದ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾನೆ.

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/D73015iu7jn2glm2MECosd

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version