ಟಿಪ್ಪರ್ ಲಾರಿ ಡಿಕ್ಕಿ: ಫುಟ್ಪಾತ್ ನಲ್ಲಿ ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿ ಬಲಿ - Mahanayaka
10:33 PM Sunday 15 - December 2024

ಟಿಪ್ಪರ್ ಲಾರಿ ಡಿಕ್ಕಿ: ಫುಟ್ಪಾತ್ ನಲ್ಲಿ ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿ ಬಲಿ

dhanush
01/10/2024

ಕುಂದಾಪುರ: ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಫುಟ್ಪಾತ್ ನಲ್ಲಿ ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಕೋಟೇಶ್ವರ ಹಾಲಾಡಿ ರಸ್ತೆಯ ಕಕ್ಕೇರಿ ಎಂಬಲ್ಲಿ ಮಂಗಳವಾರ ಮಧ್ಯಾಹ್ನ ನಡೆದಿದೆ.

ಧನುಷ್(19 ಮೃತಪಟ್ಟ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ನಾಗೂರು ನಿವಾಸಿಯಾಗಿರುವ ಧನುಷ್ ಕೋಟೇಶ್ವರದ ಕಾಳವರ ವರದರಾಜ ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ಬಿಎಸ್ ಸಿ ವಿದ್ಯಾರ್ಥಿ ಎಂದು ತಿಳಿದು ಬಂದಿದೆ.

ಇಂದು ಮಧ್ಯಾಹ್ನ ಕಾಲೇಜು ಮುಗಿಸಿ ಸ್ನೇಹಿತರೊಂದಿಗೆ ಧನುಷ್ ಕೋಟೇಶ್ವರದತ್ತ ರಸ್ತೆ ಬದಿಯಲ್ಲಿ ನಡೆದುಕೊಂಡು ಬರುತ್ತಿದ್ದ. ಈ ವೇಳೆ ವೇಗವಾಗಿ ಬಂದ ಟಿಪ್ಪರ್ ಲಾರಿಯೊಂದು ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ಧನುಷ್ ಸಾವನ್ನಪ್ಪಿದ್ದಾರೆ.

ಘಟನೆ ಸಂಬಂಧ ಸ್ಥಳಕ್ಕೆ ಆಗಮಿಸಿದ ಕುಂದಾಪುರ ಸಂಚಾರ ಪೊಲೀಸರು ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ