ಲಂಡನ್ ನಲ್ಲಿ ಮಮತಾ ಬ್ಯಾನರ್ಜಿಯ ಭಾಷಣಕ್ಕೆ ಅಡ್ಡಿ: ವಿದ್ಯಾರ್ಥಿ ಸಂಘಟನೆಗಳ ಪ್ರತಿಭಟನೆ - Mahanayaka

ಲಂಡನ್ ನಲ್ಲಿ ಮಮತಾ ಬ್ಯಾನರ್ಜಿಯ ಭಾಷಣಕ್ಕೆ ಅಡ್ಡಿ: ವಿದ್ಯಾರ್ಥಿ ಸಂಘಟನೆಗಳ ಪ್ರತಿಭಟನೆ

28/03/2025

ಲಂಡನ್ ನ ಆಕ್ಸ್ ಫರ್ಡ್ ವಿಶ್ವವಿದ್ಯಾಲಯದ ಕೆಲ್ಲಾಗ್ ಕಾಲೇಜಿನಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಭಾಷಣದ ವೇಳೆ ಪ್ರೇಕ್ಷಕರು ಪ್ರಶ್ನೆಗಳನ್ನು ಮತ್ತು ಘೋಷಣೆಗಳೊಂದಿಗೆ ಅಡ್ಡಿಪಡಿಸಿದಾಗ ಗೊಂದಲ ಉಂಟಾಯಿತು. ಸ್ಟೂಡೆಂಟ್ಸ್ ಫೆಡರೇಶನ್ ಆಫ್ ಇಂಡಿಯಾ (ಎಸ್ಎಫ್ಐ) – ಯುಕೆ ಈ ಘಟನೆಯ ಜವಾಬ್ದಾರಿಯನ್ನು ವಹಿಸಿಕೊಂಡಿದೆ.


Provided by

ಈ ಸಂದರ್ಭದಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಪ್ರತಿಭಟನೆ ನಡೆಸಿದ ಜವಾಬ್ದಾರಿಯನ್ನು ಎಡಪಂಥೀಯ ವಿದ್ಯಾರ್ಥಿ ಸಂಘಟನೆ ವಹಿಸಿಕೊಂಡಿದೆ.

ಮಮತಾ ಬ್ಯಾನರ್ಜಿ ಅವರ ಭಾಷಣದ ವಿರುದ್ಧ ಸ್ಟೂಡೆಂಟ್ಸ್ ಫೆಡರೇಶನ್ ಆಫ್ ಇಂಡಿಯಾ – ಯುನೈಟೆಡ್ ಕಿಂಗ್ಡಮ್ ಆಕ್ಸ್ ಫರ್ಡ್ ವಿಶ್ವವಿದ್ಯಾಲಯದ ಕೆಲ್ಲಾಗ್ ಕಾಲೇಜಿನಲ್ಲಿ ಪ್ರತಿಭಟನೆ ನಡೆಸಿತು.

ಮಮತಾ ಬ್ಯಾನರ್ಜಿ ಅವರ ಭಾಷಣದ ಸಮಯದಲ್ಲಿ ಎಸ್ಎಫ್ಐ ವಿದ್ಯಾರ್ಥಿ ನಾಯಕರು ಅಡ್ಡಿಪಡಿಸಿದರು ಮತ್ತು ಆರ್ಜಿ ಕರ್ ಘಟನೆ ಬಗ್ಗೆ ಪ್ರಶ್ನಿಸಿದರು. ಆಗ ಅವರು ಪ್ರತಿಕ್ರಿಯೆ ನೀಡುತ್ತಾ, “ಈ ವಿಷಯವು ನ್ಯಾಯಾಲಯದಲ್ಲಿದೆ. ಈ ಪ್ರಕರಣ ಕೇಂದ್ರ ಸರ್ಕಾರದ ಬಳಿ ಇದೆ. ಇಲ್ಲಿ ರಾಜಕೀಯ ಮಾಡಬೇಡಿ. ಈ ವೇದಿಕೆ ರಾಜಕೀಯಕ್ಕಾಗಿ ಅಲ್ಲ. ನೀವು ಬಂಗಾಳಕ್ಕೆ ಹೋಗಿ ನಿಮ್ಮ ರಾಜಕೀಯ ಪಕ್ಷವನ್ನು ಇನ್ನಷ್ಟು ಬಲಪಡಿಸಲು ಹೇಳಬೇಕು. ನಾನು ನಿಮಗೆ ಉತ್ತರಿಸುತ್ತೇನೆ. ಮೊದಲು, ನನ್ನನ್ನು ಕೊಲ್ಲಲು ಹೇಗೆ ಪ್ರಯತ್ನಿಸಲಾಯಿತು ಎಂಬುದನ್ನು ತೋರಿಸುವ ನನ್ನ ಚಿತ್ರವನ್ನು ನೋಡಿ” ಎಂದರು.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj

ಇತ್ತೀಚಿನ ಸುದ್ದಿ