ಕೋಟಾ ಹಾಸ್ಟೆಲ್‌ನಲ್ಲಿ ಅಗ್ನಿ ಅವಘಡ: 8 ವಿದ್ಯಾರ್ಥಿಗಳಿಗೆ ಗಾಯ

ಟ್ರಾನ್ಸ್ ಫಾರ್ಮರ್ ನಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ರಾಜಸ್ಥಾನದ ಕೋಟಾದ ಬಾಲಕರ ಹಾಸ್ಟೆಲ್ ಕಟ್ಟಡದಲ್ಲಿ ಭಾನುವಾರ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಎಂಟು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕುನ್ಹಾರಿ ಪೊಲೀಸ್ ಠಾಣೆ ವ್ಯಾಪ್ತಿಯ ಕೋಟಾದ ಲ್ಯಾಂಡ್ ಮಾರ್ಕ್ ಸಿಟಿಯಲ್ಲಿ ಬೆಳಿಗ್ಗೆ 6.30 ರ ಸುಮಾರಿಗೆ ಈ ಘಟನೆ ನಡೆದಿದೆ.
ಐದು ಅಂತಸ್ತಿನ ಹಾಸ್ಟೆಲ್ ಕಟ್ಟಡದ ನೆಲಮಹಡಿಯಲ್ಲಿ ಆಳವಡಿಸಲಾದ ವಿದ್ಯುತ್ ಪರಿವರ್ತಕದಲ್ಲಿ ಶಾರ್ಟ್ ಸರ್ಕ್ಯೂಟ್ ಬೆಂಕಿಗೆ ಕಾರಣವಾಗಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ವಿಧಿವಿಜ್ಞಾನ ತಂಡವು ಘಟನೆಯ ಹಿಂದಿನ ನಿಖರ ಕಾರಣವನ್ನು ಕಂಡುಹಿಡಿಯಲು ಪ್ರಯತ್ನಿಸುತ್ತಿದೆ.
ಘಟನೆಯಲ್ಲಿ ಎಂಟು ವಿದ್ಯಾರ್ಥಿಗಳು ಗಾಯಗೊಂಡಿದ್ದು, ಒಬ್ಬರಿಗೆ ತೀವ್ರ ಸುಟ್ಟ ಗಾಯಗಳಾಗಿವೆ. ಪೊಲೀಸರು ಎಲ್ಲಾ ವಿದ್ಯಾರ್ಥಿಗಳನ್ನು ಮತ್ತೊಂದು ಹಾಸ್ಟೆಲ್ ಗೆ ಸ್ಥಳಾಂತರಿಸಿ ಊಟದ ವ್ಯವಸ್ಥೆ ಮಾಡಿದರು. ಗಾಯಗೊಂಡ ಇಬ್ಬರು ವಿದ್ಯಾರ್ಥಿಗಳನ್ನು ಇನ್ನೂ ದಾಖಲಿಸಲಾಗಿದ್ದು, ಉಳಿದವರಿಗೆ ಚಿಕಿತ್ಸೆ ನೀಡಿ ಬಿಡುಗಡೆ ಮಾಡಲಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth