8:39 AM Wednesday 22 - October 2025

ಮನ್ ಕಿ ಬಾತ್ ಕೇಳದ ವಿದ್ಯಾರ್ಥಿಗಳಿಗೆ 100 ರೂಪಾಯಿ ದಂಡ!

man ki bath
06/05/2023

ಡೆಹ್ರಾಡೂನ್: ಪ್ರಧಾನಿ ನರೇಂದ್ರ ಮೋದಿ ಅವರು ನಡೆಸಿಕೊಡುವ ಮನ್ ಕಿ ಬಾತ್ ಕಾರ್ಯಕ್ರಮ ನೂರು ಸಂಚಿಕೆಗಳನ್ನು ಪೂರೈಸಿದೆ. ಇದೇ ಸಂದರ್ಭದಲ್ಲಿ 100ನೇ ಕಂತನ್ನು ಶಾಲೆಗಳಲ್ಲೂ ಸಹ ಆಯೋಜನೆ ಮಾಡಲಾಗಿದ್ದು, ಇದಕ್ಕೆ ಗೈರು ಹಾಜರಾದ ವಿದ್ಯಾರ್ಥಿಗಳಿಗೆ 100 ರೂಪಾಯಿ ದಂಡ ವಿಧಿಸಲಾಗಿದೆ.

ಮನ್ ಕಿ ಬಾತ್  100ನೇ ಕಂತು ಏಪ್ರಿಲ್ 30 ರಂದು ಪ್ರಸಾರವಾಗಿದ್ದು, ಈ ವೇಳೆ ಹಾಜರಾಗದೇ ಇದ್ದ ವಿದ್ಯಾರ್ಥಿಗಳಿಗೆ ಡೆಹ್ರಾಡೂನ್ ಜಿಆರ್‌ ಡಿ ನಿರಂಜನ್ಪುರ್ ಅಕಾಡೆಮಿಯು 100 ರೂಪಾಯಿ ದಂಡ ವಿಧಿಸಿದೆ ಎಂದು ಪೋಷಕರು ಆರೋಪಿಸಿದ್ದಾರೆ.

ಮನ್ ಕಿ ಬಾತ್ ನೂರನೇ ಕಂತು ಪ್ರಸಾರವಾದ ದಿನ ಗೈರು ಹಾಜರಾದ ವಿದ್ಯಾರ್ಥಿಗಳಿಗೆ ವೈದ್ಯಕೀಯ ಪ್ರಮಾಣ ಪತ್ರ ಸಲ್ಲಿಸಲು ತಿಳಿಸಿದ್ದ ಶಾಲಾ ಆಡಳಿತ ಮಂಡಳಿ, ಇದಕ್ಕೆ ತಪ್ಪಿದಲ್ಲಿ ನೂರು ರೂಪಾಯಿ ದಂಡ ಪಾವತಿಸುವಂತೆ ಸೂಚಿಸಿದೆ. ಇದೀಗ ಹಲವು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದು, ಈ ಬಗ್ಗೆ ಶಿಕ್ಷಣಾಧಿಕಾರಿಗಳಿಗೂ ದೂರು ನೀಡಿದ್ದಾರೆ.

ಮನ್ ಕಿ ಬಾತ್ ಗೆ ಗೈರು ಹಾಜರಾದ ವಿದ್ಯಾರ್ಥಿಗಳು ದಂಡ ಪಾವತಿಸುವಂತೆ ಶಾಲಾ ಆಡಳಿತ ಮಂಡಳಿಯ ವಾಟ್ಸಾಪ್ ಗ್ರೂಪ್ ನಲ್ಲಿ ಆದೇಶಿಸಿತ್ತು. ಈ ಬಗ್ಗೆ ಪೋಷಕರು ಮತ್ತು ವಿದ್ಯಾರ್ಥಿಗಳ ರಾಷ್ಟ್ರೀಯ ಸಂಘದ ರಾಷ್ಟ್ರೀಯ ಅಧ್ಯಕ್ಷ ಆರೀಫ್ ಖಾನ್ ಅವರು ಡೆಹ್ರಾಡೂನ್ ಮುಖ್ಯ ಶಿಕ್ಷಣಾಧಿಕಾರಿಗೆ ಪತ್ರ ಬರೆದು ಕ್ರಮಕ್ಕೆ ಒತ್ತಾಯಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version