ವಿದ್ಯಾರ್ಥಿಗಳು ಅಸ್ವಸ್ಥ ಪ್ರಕರಣ: ಮೊರಾರ್ಜಿ ವಸತಿ ಶಾಲೆಯ ಪ್ರಾಂಶುಪಾಲ ಅಮಾನತು - Mahanayaka
2:10 AM Saturday 18 - October 2025

ವಿದ್ಯಾರ್ಥಿಗಳು ಅಸ್ವಸ್ಥ ಪ್ರಕರಣ: ಮೊರಾರ್ಜಿ ವಸತಿ ಶಾಲೆಯ ಪ್ರಾಂಶುಪಾಲ ಅಮಾನತು

chamarajanagara
20/07/2023

ಚಾಮರಾಜನಗರ: ಚಿಕನ್ ಊಟ ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಂಡ್ಲುಪೇಟೆ ತಾಲೂಕಿನ ಯಡವನಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲ ಕುಮಾರಸ್ವಾಮಿ ಅವರನ್ನು ಅಮಾನತು ಮಾಡಲಾಗಿದೆ.


Provided by

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ‌ ಸಂಘದ ಕಾರ್ಯ ನಿರ್ವಾಹಕ ನಿರ್ದೇಶಕ ನವೀನ್ ಕುಮಾರ್ ರಾಜು ಅವರಿಂದು ಆದೇಶ ಹೊರಡಿಸಿದ್ದು ಕುಮಾರಸ್ವಾಮಿ ಅವರನ್ನು ಅಮಾನತುಪಡಿಸಿ, ಇಲಾಖೆ ವಿಚಾರಣೆಯನ್ನು ಕಾಯ್ದಿರಿಸಿ ಇವರ ಸ್ಥಾನಕ್ಕೆ ಪ್ರಭಾರ ಪ್ರಾಂಶುಪಾಲರಾಗಿ ಅದೇ ಶಾಲೆಯ ಕಂಪ್ಯೂಟರ್ ಶಿಕ್ಷಕ ಎಂ.ಕುಮಾರಸ್ವಾಮಿ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

ಆದೇಶದಲ್ಲಿ ಅಮಾನತುಗೊಂಡ ಪ್ರಾಂಶುಪಾಲರೇ ಪ್ರಭಾರ ನಿಲಯಪಾಲಕರಾಗಿ ಕಾರ್ಯನಿರ್ವಹಿಸಿದ್ದು, ಅಡುಗೆ ಸಿಬ್ಬಂದಿಗಳಲ್ಲಿ ಸಮನ್ವಯತೆ ಇಲ್ಲದಿರುವುದು, ವಸತಿ ಶಾಲೆಯಲ್ಲಿ ಶುಚಿತ್ವ ಇಲ್ಲದ್ದು ಕಂಡುಬಂದಿದೆ ಎಂದು ಹೇಳಿದ್ದಾರೆ.

ಕಳೆದ ಭಾನುವಾರ ರಾತ್ರಿ ಚಿಕನ್ ಆಹಾರ ಸೇವಿಸಿ 28 ಮಕ್ಕಳಿಗೆ ವಾಂತಿ-ಬೇಧಿ ಕಾಣಿಸಿಕೊಂಡು 16 ಮಂದಿ ವಿದ್ಯಾರ್ಥಿಗಳು ಆಸ್ಪತ್ರೆಯಲ್ಲಿ ದಾಖಲಾಗಿದ್ದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 7483551849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ