ಕೋಚಿಂಗ್ ಸೆಂಟರ್ ನಲ್ಲಿ ಇದ್ದಕ್ಕಿದ್ದಂತೆ ಬೆಂಕಿ: ಪ್ರಾಣ ಉಳಿಸಲು ಕಿಟಕಿಯಿಂದ ಜಿಗಿದ ವಿದ್ಯಾರ್ಥಿಗಳು..!

ದೆಹಲಿಯ ಮುಖರ್ಜಿ ನಗರದಲ್ಲಿರುವ ಕಟ್ಟಡವೊಂದರಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದೆ. ಇದು ಸ್ಥಳೀಯ ನಿವಾಸಿಗಳಲ್ಲಿ ಆತಂಕ ಸೃಷ್ಟಿಸಿತು.
ಈ ಕಟ್ಟಡವನ್ನು ಬೆಂಕಿ ಆವರಿಸಿದ ಕೂಡಲೇ ಹಲವಾರು ಮಂದಿ ಅದ್ರಲ್ಲೂ ಹೆಚ್ಚಾಗಿ ವಿದ್ಯಾರ್ಥಿಗಳು ತಮ್ಮ ಸುರಕ್ಷತೆಗಾಗಿ ಕೆಳಗೆ ಇಳಿಯುತ್ತಿರುವುದು ಕಂಡುಬಂತು. ಬೆಂಕಿ ವ್ಯಾಪಿಸುತ್ತಿದ್ದಂತೆ ಹೆಚ್ಚಿನ ವಿದ್ಯಾರ್ಥಿಗಳು ಹಗ್ಗಗಳನ್ನು, ತಂತಿಗಳನ್ನು ಬಳಸಿ ಕಟ್ಟಡದಿಂದ ಜಿಗಿಯುತ್ತಿರುವುದು ಕಂಡುಬಂತು.
ದೆಹಲಿ ಅಗ್ನಿಶಾಮಕ ಇಲಾಖೆಯ ಪ್ರಕಾರ, 11 ಅಗ್ನಿಶಾಮಕ ಟೆಂಡರ್ ಗಳನ್ನು ತಕ್ಷಣ ಸ್ಥಳಕ್ಕೆ ರವಾನಿಸಲಾಗಿದೆ ಮತ್ತು ಶೀಘ್ರದಲ್ಲೇ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು.
ಅರ್ಧ ಗಂಟೆಗಳ ಅಗ್ನಿಶಾಮಕ ಕಾರ್ಯಾಚರಣೆಯ ನಂತರ, ಬೆಂಕಿಯನ್ನು ಸಂಪೂರ್ಣವಾಗಿ ನಿಯಂತ್ರಣಕ್ಕೆ ತರಲಾಯಿತು. ಕೋಚಿಂಗ್ ಸೆಂಟರ್ ಮತ್ತು ಹತ್ತಿರದ ಕಟ್ಟಡದಿಂದ ಎಲ್ಲಾ ಜನರನ್ನು ರಕ್ಷಿಸಲಾಯಿತು. ಇತ್ತೀಚಿನ ವರದಿಗಳ ಪ್ರಕಾರ, ಅಗ್ನಿಶಾಮಕ ಕಾರ್ಯಾಚರಣೆ ಈಗ ಮುಕ್ತಾಯಗೊಂಡಿದೆ.
ಕಟ್ಟಡದ ಬೆಂಕಿಯಿಂದಾಗಿ ಇಲ್ಲಿಯವರೆಗೆ ಯಾವುದೇ ದೊಡ್ಡ ಗಾಯಗಳು ವರದಿಯಾಗಿಲ್ಲ ಎಂದು ದೆಹಲಿ ಅಗ್ನಿಶಾಮಕ ಇಲಾಖೆ ತಿಳಿಸಿದೆ.
ಪ್ರಾಥಮಿಕ ತನಿಖೆಯ ನಂತರ ಇಲ್ಲಿ ವಿದ್ಯುತ್ ಮೀಟರ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇದರಿಂದ ಕಟ್ಟಡದ ಒಳಗೆ ಇದ್ದ ವಿದ್ಯಾರ್ಥಿಗಳು ಹೊಗೆ ಕಂಡು ಭಯಭೀತರಾಗಿದ್ದಾರೆ. ಹೀಗಾಗಿ ಅವರು ತಮ್ಮ ಸುರಕ್ಷತೆಗಾಗಿ ಕೋಚಿಂಗ್ ಸೆಂಟರ್ ನ ಹಿಂಭಾಗದಿಂದ ಕೆಳಗಿಳಿಯಲು ಪ್ರಾರಂಭಿಸಿದರು ಎಂದು ಪೊಲೀಸರು ತಿಳಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw