ಬುದ್ಧಿವಾದ ಹೇಳಿದ ಚರ್ಚ್ ಪಾದ್ರಿಗೆ ಬೈಕ್ ನಿಂದ ಡಿಕ್ಕಿ ಹೊಡೆದ ವಿದ್ಯಾರ್ಥಿಗಳು!

ಕೇರಳ: ಚರ್ಚ್ ಆವರಣದಲ್ಲಿ ಬೈಕ್ ಗಳನ್ನು ವೇಗವಾಗಿ ಚಲಿಸುತ್ತಾ, ಗಲಾಟೆ ನಡೆಸುತ್ತಿದ್ದ ವಿದ್ಯಾರ್ಥಿಗಳಿಗೆ ಬುದ್ಧಿವಾದ ಹೇಳಿದ ಪಾದ್ರಿಗೆ ವಿದ್ಯಾರ್ಥಿಗಳು ಬೈಕ್ ನಿಂದ ಡಿಕ್ಕಿ ಹೊಡೆದು ವಿಕೃತಿ ಮೆರೆದ ಘಟನೆ ಕೇರಳದ ಕೊಟ್ಟಾಯಂನಲ್ಲಿ ನಡೆದಿದೆ.
ಚರ್ಚ್ ನಲ್ಲಿ ಪೂಜೆ ನಡೆಯುತ್ತಿದ್ದು, ಈ ಸಂದರ್ಭದಲ್ಲಿ ಚರ್ಚ್ ನ ಆವರಣದಲ್ಲಿ ವಿದ್ಯಾರ್ಥಿಗಳು ವೇಗವಾಗಿ ಕಾರು ಮತ್ತು ಬೈಕ್ ಗಳನ್ನು ಚಲಾಯಿಸುತ್ತಾ, ಗಲಾಟೆ ಮಾಡುತ್ತಿದ್ದರು. ಹೀಗಾಗಿ ಚರ್ಚ್ ನಲ್ಲಿ ಪೂಜೆ ನಡೆಯುತ್ತಿದೆ, ಇಲ್ಲಿ ಗಲಾಟೆ ಮಾಡಬೇಡಿ ಹೊರಗೆ ಹೋಗುವಂತೆ ಪಾದ್ರಿ ವಿದ್ಯಾರ್ಥಿಗಳಿಗೆ ಹೇಳಿದ್ದರು.
ಪಾದ್ರಿಯ ಮಾತಿಗೆ ಕ್ಯಾರೇ ಅನ್ನದ ವಿದ್ಯಾರ್ಥಿಗಳು ಮತ್ತೆ ಚರ್ಚ್ ಆವರಣದಲ್ಲಿ ಗಲಾಟೆ ಆರಂಭಿಸಿದ್ದಾರೆ. ಹೀಗಾಗಿ ಪಾದ್ರಿ ಚರ್ಚ್ ನ ಗೇಟ್ ಗಳನ್ನು ಮುಚ್ಚಲು ಯತ್ನಿಸಿದ್ದಾರೆ. ಇದರಿಂದ ಕೋಪಗೊಂಡ ವಿದ್ಯಾರ್ಥಿಗಳು ಮೊದಲು ಪಾದ್ರಿಯ ಕೈಗೆ ಬೈಕ್ ನಿಂದ ಡಿಕ್ಕಿ ಹೊಡೆದಿದ್ದು, ಬಳಿಕ ಹಿಂಬದಿಯಿಂದ ಬಂದು ಬೈಕ್ ನಿಂದ ಡಿಕ್ಕಿ ಹೊಡೆದಿದ್ದಾರೆ. ಪರಿಣಾಮವಾಗಿ ಪಾದ್ರಿ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಸದ್ಯ ಪಾದ್ರಿಯವರ ಆರೋಗ್ಯ ಸ್ಥಿರವಾಗಿದೆ. ಘಟನೆಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳನ್ನು ಬಂಧಿಸಿ ಅವರು, ಕೃತ್ಯಕ್ಕೆ ಬಳಸಿದ ಕಾರು ಮತ್ತು ಬೈಕ್ ಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth